ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ 'ಭ್ರಷ್ಟ ಜನತಾ ಪಾರ್ಟಿ' ಎಂದು ಟೀಕಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳು, ಭ್ರಷ್ಟಾಚಾರದಿಂದ ಕೂಡಿದ್ದು, ಅಧಿಕಾರ ದುರುಪಯೋಗವನ್ನು ಮಾಡುತ್ತಿದೆ. ದುರಹಂಕಾರದಿಂದ ಜನರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಅವರು ಆರೋಪಿಸಿದ್ದಾರೆ.
.ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನರ್ ರಚನೆ: ಸಿದ್ದರಾಮಯ್ಯ.ನೋಟು ಅಮಾನ್ಯದಂತೆ ರಾಜ್ಯಗಳ ಮೇಲೆ ದಾಳಿ: ಜಿ ರಾಮ್ ಜಿ ಕಾಯ್ದೆ ಬಗ್ಗೆ ರಾಹುಲ್.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ ಭಂಡಾರಿ ಹತ್ಯೆ, ಉತ್ತರ ಪ್ರದೇಶದಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣ, ಇಂದೋರ್ನಲ್ಲಿ ಕಲುಪಿತ ನೀರು ಸೇರಿದಂತೆ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಜನರ ಸುಲಿಗೆ ಮಾಡುತ್ತಿದೆ. ಕೋಟ್ಯಧಿಪತಿಗಳಿಗಾಗಿ ಅರಾವಳಿ ಪರ್ವತ ಶ್ರೇಣಿಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕೋಟ್ಯಧಿಪತಿಗಳಿಗಾಗಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಡಬಲ್ ಎಂಜಿನ್ ಸರ್ಕಾರ ನಡೆಯುತ್ತಿದೆ. ಜನ ಸಾಮಾನ್ಯರಿಗೆ ವಿನಾಶವನ್ನು ಒಡ್ಡುತ್ತಿದೆ ಎಂದು ಅವರು ಹೇಳಿದ್ದಾರೆ.