ನವದೆಹಲಿ: ಪಶ್ಚಿಮ ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಮಾಜಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಅಗರ್ವಾಲ್ ಮತ್ತು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಮುಖ್ಯ ಸಲಹೆಗಾರರಾಗಿ ಸುಬ್ರತಾ ಗುಪ್ತಾ ಅವರನ್ನು ನೇಮಕ ಮಾಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಬಿಜೆಪಿ-ಚುನಾವಣಾ ಆಯೋಗದ ‘ಚೋರ್ ಬಜಾರ್’ನಲ್ಲಿ ಕಳ್ಳತನ ದೊಡ್ಡದಾದಷ್ಟೂ ಬಹುಮಾನವೂ ದೊಡ್ಡದಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ನೇಮಕಾತಿಯು ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವಿನ ಲಜ್ಜೆಗೆಟ್ಟ ಹೊಂದಾಣಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಎಕ್ಸ್ನಲ್ಲಿ ಹಿಂದಿ ಭಾಷೆಯಲ್ಲಿ ಮಾಡಲಾದ ಪೋಸ್ಟ್ನಲ್ಲಿ‘ಬಿಜೆಪಿ-ಚುನಾವಣಾ ಆಯೋಗದ ‘ಚೋರ್ ಬಜಾರ್’ನಲ್ಲಿ ಕಳ್ಳತನ ದೊಡ್ಡದಾದಷ್ಟೂ ಬಹುಮಾನವೂ ದೊಡ್ಡದಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು, ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತಿದ್ದ 1990ರ ಬ್ಯಾಚ್ನ ಐಎಎಸ್ ಅಧಿಕಾರಿ, ಮಾಜಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ಅದೇ ರೀತಿ, ಬಂಗಾಳದಲ್ಲಿ ವಿಶೇಷ ರೋಲ್ ವೀಕ್ಷಕರಾಗಿ ಎಸ್ಐಆರ್ ಮೂಲಕ ಹೆಸರು ಅಳಿಸುವಿಕೆಯ ಮೇಲ್ವಿಚಾರಣೆ ಮಾಡಿದ್ದ 1990ರ ಬ್ಯಾಚ್ನ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಮುಖ್ಯಮಂತ್ರಿಯ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಗಮನ ಸೆಳೆದಿದ್ದರು.

ಈ ನೇಮಕಾತಿಯು ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ಲಜ್ಜೆಗೆಟ್ಟ ಒಪ್ಪಂದ, ಪಿತೂರಿಯನ್ನು ಪ್ರತಿಬಿಂಬಿಸುತ್ತವೆ ಎಂದು ಜೈರಾಂ ರಮೇಶ್ ಕಿಡಿಕಾರಿದ್ದರು.

ಇದು ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿಲ್ಲ ಮತ್ತು ಬಿಜೆಪಿಗೆ ಅನುಕೂಲ ಮಾಡಿಕೊಡಲು ವಿಶೇಷವಾಗಿ ಶ್ರಮಿಸಿದೆ ಎಂಬುದಕ್ಕೆ ಪುರಾವೆಯಾಗಿದೆ ಎಂದಿದ್ದರು.

ಚುನಾವಣೆಗೂ ಮುನ್ನ ನಡೆದ ಎಸ್ಐಆರ್ನಲ್ಲಿ 91 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿತ್ತು. ಇದರ ಜೊತೆಗೆ, 27 ಲಕ್ಷ ಮತದಾರರ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿರಲಿಲ್ಲ. ಇದು ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.