ನವದೆಹಲಿ: ತ್ರಿಪುರಾದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಪಿಎಪಿ) ಅಡಿ ನಾಗರಿಕರನ್ನು ಬಂಧಿಸುವ ಮೂಲಕ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ತ್ರಿಪುರಾದಲ್ಲಿ ಮಸೀದಿಗಳ ಮೇಲೆ ನಡೆದ ದಾಳಿ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ನಿರ್ವಹಿಸುವ ಪತ್ರಕರ್ತರು ಮತ್ತು ಹೋರಾಟಗಾರರ ವಿರುದ್ಧ ಪೊಲೀಸರು ಯುಎಪಿಎ ಅಡಿ ಪ್ರಕರಣ ದಾಖಲಿಸಿದ ನಂತರ ರಾಹುಲ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ’ತ್ರಿಪುರ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಆದರೆ, ಬಿಜೆಪಿಯವರು ಮಾಹಿತಿದಾರರನ್ನು ಗುಂಡಿಕ್ಕಿ ಕೊಲ್ಲುವಂತಹ ತಮ್ಮ ನೆಚ್ಚಿನ ತಂತ್ರವನ್ನು ಇಲ್ಲಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಮಸೀದಿಗಳ ಮೇಲಿನ ದಾಳಿ ಮತ್ತು ಸಂಘರ್ಷಕ್ಕೆ ಸಂಬಂಧಿಸಿದಂತೆ, ತ್ರಿಪುರಾ ಪೊಲೀಸರು ಶನಿವಾರ ಸಾಮಾಜಿಕ ಜಾಲತಾಣ ಖಾತೆ ಹೊಂದಿರುವ 102 ಮಂದಿಯ ವಿರುದ್ಧ ಯುಎಪಿಎ, ಅಪರಾಧಕ್ಕೆ ಸಂಚು ರೂಪಿಸುವುದು ಸೇರಿದಂತೆ ವಿವಿಧ ಆರೋಪಗಳ ಅಡಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಜೊತೆಗೆ, ಟ್ವಿಟರ್, ಫೇಸ್‌ಬುಕ್ ಮತ್ತು ಯುಟ್ಯೂಬ್ ಕಂಪನಿಗಳಿಗೆ ನೋಟಿಸ್ ನೀಡಿ, ಇಷ್ಟೂ ಮಂದಿಯ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.