ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಪಾಸ್‌ಪೋರ್ಟ್ ಪಡೆದುಕೊಂಡ ರಾಹುಲ್‌ ಗಾಂಧಿ

Published 28 ಮೇ 2023, 13:12 IST
Last Updated 28 ಮೇ 2023, 13:12 IST
ಅಕ್ಷರ ಗಾತ್ರ

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಹೊಸ ಸಾಮಾನ್ಯ ಪಾಸ್‌ಪೋರ್ಟ್‌ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರಿಗೆ ಪಾಸ್‌ಪೋರ್ಟ್‌ ಪಡೆಯಲು ದೆಹಲಿಯ ನ್ಯಾಯಾಲಯವು ನಿರಾಕ್ಷೇಪಣಾ ಪತ್ರವನ್ನು (ಎನ್‌ಒಸಿ) ಮಂಜೂರು ಮಾಡಿದ ಎರಡು ದಿನಗಳ ಬಳಿಕ ಅವರಿಗೆ ಹೊಸ ಪಾಸ್‌ಪೋರ್ಟ್‌ ಲಭಿಸಿದೆ ಎಂದೂ ಹೇಳಿವೆ.

ರಾಹುಲ್‌ ಅವರು ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೊಗೆ ಸೋಮವಾರ ಸಂಜೆ ತೆರಳಲಿದ್ದಾರೆ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭೆಯ ಸದಸ್ಯತ್ವ ಕಳೆದುಕೊಂಡ ನಂತರ ರಾಹುಲ್‌ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಒಪ್ಪಿಸಿ, ಸಾಮಾನ್ಯ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT