ನವದೆಹಲಿ: ‘ಅಗ್ನಿಪಥ’ ಯೋಜನೆ ಮತ್ತು ರಾಷ್ಟ್ರೀಯ ಭದ್ರತೆಯಂತಹ ಸೂಕ್ಷ್ಮ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ದೇಶದ ದಾರಿ ತಪ್ಪಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟೀಕಿಸಿದ್ದು ಈ ವಿಚಾರದಲ್ಲಿ ಸಂಸತ್ತಿನಲ್ಲಿ ಹೇಳಿಕೆ ನೀಡಲು ಸಿದ್ಧ ಎಂದರು.
.ಆರು ಮಂದಿ ಸೇರಿ ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ: ರಾಹುಲ್ ಗಾಂಧಿ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ ಮಾತನಾಡಿದ ಅವರು ‘ನಮ್ಮ ಯೋಧರು ದೇಶದ ಗಡಿ ರಕ್ಷಿಸುತ್ತಾರೆ. ಇದು ನಮ್ಮ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಷಯವಾಗಿದೆ. ಅಗ್ನಿವೀರರ ವಿಷಯದಲ್ಲಿ ದೇಶವನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ದೂರಿದರು.

‘ವಿರೋಧ ಪಕ್ಷದ ನಾಯಕರು ಬಜೆಟ್ ಬಗ್ಗೆ ಸಾಕಷ್ಟು ತಪ್ಪು ಅಭಿಪ್ರಾಯಗಳನ್ನು ಹರಡಲು ಪ್ರಯತ್ನಿಸಿದ್ದಾರೆ. ಎಲ್ಲದಕ್ಕೂ ಹಣಕಾಸು ಸಚಿವರು ಸ್ಪಷ್ಟೀಕರಣ ನೀಡಲಿದ್ದಾರೆ’ ಎಂದರು.
.ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ.
‘ಹುತಾತ್ಮನಾದ ‘ಅಗ್ನಿವೀರ’ನ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಲಾಗಿದೆ ಎಂದು ಹಣಕಾಸು ಸಚಿವರು ಸದನಕ್ಕೆ ತಿಳಿಸಿದ್ದಾರೆ. ಆದರೆ ಅದು ವಿಮೆಯ ಹಣವೇ ಹೊರತು ಪರಿಹಾರ ಮೊತ್ತ ಅಲ್ಲ’ ಎಂದು ರಾಹುಲ್ ಈಚೆಗೆ ಆರೋಪಿಸಿದ್ದರು.
.‘ಕುರ್ಚಿ ಬಚಾವೊ ಬಜೆಟ್’ ಎಂದು ಬಿಂಬಿಸಿ;ರಾಜ್ಯಗಳನ್ನು ಟೀಕಿಸಬೇಡಿ: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.