ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಖಾಲಿಸ್ತಾನ ಪ್ರತ್ಯೇಕ ರಾಷ್ಟ್ರ ಹೋರಾಟಕ್ಕೆ ರಾಹುಲ್ ಗಾಂಧಿ ಸಮರ್ಥನೆ: ಪನ್ನೂ

Published : 11 ಸೆಪ್ಟೆಂಬರ್ 2024, 5:45 IST
Last Updated : 11 ಸೆಪ್ಟೆಂಬರ್ 2024, 5:45 IST
ಫಾಲೋ ಮಾಡಿ
Comments

ನವದೆಹಲಿ: ಖಾಲಿಸ್ತಾನಿಗಳ ಪ್ರತ್ಯೇಕ ರಾಷ್ಟ್ರದ ಹೋರಾಟವನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ ಎಂದು ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್‌ಪತ್ವಂತ್ ಸಿಂಗ್ ಪನ್ನೂ ಹೇಳಿದ್ದಾರೆ.

‘ರಾಹುಲ್ ಗಾಂಧಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ‘ಜಸ್ಟಿಸ್ ಖಾಲಿಸ್ತಾನಿ’ ಜನಾಭಿಪ್ರಾಯ ಸಂಗ್ರಹ ಅಭಿಯಾನಕ್ಕಾಗಿ ಸಿಖ್ಖರನ್ನು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಸಿಖ್ಖರಿಗೆ ಪೇಟ, ಕಡವನ್ನು ಧರಿಸಿ ಗುರುದ್ವಾರಕ್ಕೆ ಹೋಗುವುದಕ್ಕೆ ಅನುಮತಿ ನೀಡಲಾಗುತ್ತದೆಯೇ ಎಂಬುದರ ಬಗ್ಗೆ ಯೋಚಿಸಬೇಕಿದೆ’ ಎಂದಿದ್ದಾರೆ.

‘ಭಾರತದಲ್ಲಿ ಸಿಖ್ಖರ ಅಸ್ತಿತ್ವದ ಬೆದರಿಕೆ’ ಕುರಿತು ರಾಹುಲ್ ಹೇಳಿಕೆಯು ಕೇವಲ ದಿಟ್ಟತನದಿಂದ ಕೂಡಿರುವುದಷ್ಟೇ ಅಲ್ಲ, ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ 1947ರಿಂದ ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಿಖ್ಖರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದೆ. ಸಿಖ್ಖರ ತಾಯ್ನಾಡಾಗಿ ಖಾಲಿಸ್ತಾನ ಪ್ರತ್ಯೇಕ ರಾಷ್ಟ್ರ ಸ್ಥಾಪಿಸಬೇಕೆಂಬ ಪಂಜಾಬ್ ಸ್ವಾತಂತ್ರ್ಯದ ಜನಾಭಿಪ್ರಾಯ ಸಂಗ್ರಹಣೆಯ ಸಮರ್ಥನೆಯ ಬಗ್ಗೆ ಸಿಖ್ಸ್ ಫಾರ್ ಜಸ್ಟಿಸ್‌ ಸಂಘಟನೆ ಹೊಂದಿರುವ ನಿಲುವನ್ನು ಆಧರಿಸಿದೆ’ ಎಂದು ತಿಳಿಸಿದ್ದಾರೆ.

ಎರಡು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದ ರಾಹುಲ್‌ ಗಾಂಧಿ ಅವರು ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ನಡೆದ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT