ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶಕ್ಕೆ ಪ್ರವೇಶಿಸಿದ ರಾಹುಲ್ ಗಾಂಧಿಯ ಭಾರತ ಜೋಡೊ ನ್ಯಾಯ ಯಾತ್ರೆ

Published 2 ಮಾರ್ಚ್ 2024, 11:34 IST
Last Updated 2 ಮಾರ್ಚ್ 2024, 11:34 IST
ಅಕ್ಷರ ಗಾತ್ರ

ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿದೆ.

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು. ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕೂಡ ಇದ್ದರು.

ಮೊರೆನಾ ನಗರದ ಭೀಮರಾಮ್ ಅಂಬೇಡ್ಕರ್ ಸ್ಟೇಡಿಯಂನಲ್ಲಿ ಧ್ವಜ ಹಸ್ತಾಂತರ ಸಮಾರಂಭ ನಡೆಯಿತು.

ಗ್ವಾಲಿಯರ್‌ನಲ್ಲಿ ಸಂಜೆ ರಾಹುಲ್ ಗಾಂಧಿ ರೋಡ್‌ ಶೋ ನಡೆಸಲಿದ್ದು, ಹಜೀರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆ.ಕೆ. ಮಿಶ್ರಾ ಹೇಳಿದ್ದಾರೆ.

ಮೊರೇನಾ, ಗ್ವಾಲಿಯರ್‌, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್‌ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT