ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್

Published 28 ಮಾರ್ಚ್ 2024, 14:25 IST
Last Updated 28 ಮಾರ್ಚ್ 2024, 14:25 IST
ಅಕ್ಷರ ಗಾತ್ರ

ತಿರುವನಂತಪುರ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಮೌನ ವಹಿಸಿದ್ದಾರೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ.

‘ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಸಿಎಎ ಜಾರಿಗೆ ನಿರ್ಧಾರ ತೆಗೆದುಕೊಂಡರೂ, ವಯನಾಡ್‌ನ ಸಂಸದರು ತಮ್ಮ ನೇತೃತ್ವದಲ್ಲಿ ನಡೆಸಿದ ಭಾರತ್ ಜೋಡೊ ನ್ಯಾಯ ಯಾತ್ರೆಯ ಸಂದರ್ಭ ಒಂದೇ ಒಂದು ಶಬ್ದ ಮಾತನಾಡಲಿಲ್ಲ’ ಎಂದು ಸಿಪಿಎಂ ಆಯೋಜಿಸಿದ್ದ ಸಿಎಎ ವಿರೋಧಿ ರ‍್ಯಾಲಿಯಲ್ಲಿ ‌ಅವರು ವಾಗ್ದಾಳಿ ನಡೆಸಿದರು.

‘ಯಾತ್ರೆಯಲ್ಲೂ ಸಿಎಎ ಬಗ್ಗೆ ಮಾತನಾಡದ ರಾಹುಲ್‌‌, ನಂತರವೂ ಈ ಕುರಿತಂತೆ ಏನೊಂದು ಹೇಳುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧ ಮುಖ್ಯಮಂತ್ರಿಯು ಹೇಳಿಕೆ ನೀಡಿದ ನಂತರ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌, ‘ರಾಜಕೀಯ ಲಾಭಕ್ಕಾಗಿ ‌ಈ ವಿಷಯವನ್ನು ಸಿ.ಎಂ ಪ್ರಸ್ತಾಪಿಸುತ್ತಿದ್ದಾರೆ’ ಎಂದು ವಿಜಯನ್ ವಿರುದ್ಧ ‌ಗುಡುಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT