PM lacks courage to confront Donald Trump over claims that US stopped India-Pak conflict: Rahul

ನಳಂದ(ಬಿಹಾರ): ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದರೂ ಅದನ್ನು ವಿರೋಧಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿಗೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಳಂದದಲ್ಲಿ ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಹಾರವು ಈಗ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕಳಪೆ ಆರೋಗ್ಯ ಮೂಲಸೌಕರ್ಯಗಳಿಂದ ಸುದ್ದಿ ಮಾಡುತ್ತಿದೆ ಎಂದಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಾನು ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷರು ಹಲವು ಬಾರಿ ಹೇಳಿಕೊಂಡಿದ್ದಾರೆ.. ಆದರೆ, ನಮ್ಮ ಪ್ರಧಾನಿಗೆ ಅವರನ್ನು ಎದುರಿಸುವ ಧೈರ್ಯವಿಲ್ಲ’ಎಂದು ರಾಹುಲ್ ಆರೋಪಿಸಿದ್ದಾರೆ.

ಬಿಹಾರದಲ್ಲಿ ಭೂಮಿ ಲಭ್ಯವಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಟೀಕಿಸಿದ ರಾಹುಲ್, ರಾಜ್ಯ ಸರ್ಕಾರವು ಕೈಗಾರಿಕೆಗಳಿಗೆ ಕಡಿಮೆ ಬೆಲೆಗೆ ನಿವೇಶನಗಳನ್ನು ನೀಡಿದೆ ಎಂದು ಆರೋಪಿಸಿದ್ದಾರೆ.

‘ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ವೋಟ್ ಚೋರಿ ಮೂಲಕ ಸರ್ಕಾರವನ್ನು ರಚಿಸಿತ್ತು. ಎನ್ಡಿಎ ಮತ್ತು ಪ್ರಧಾನಿ ಮೋದಿ, ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ನಾಶಮಾಡಲು ಮುಂದಾಗಿದ್ದಾರೆ’ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಬಿಹಾರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ, ಅದು ರೈತರು, ಕಾರ್ಮಿಕರು, ದಲಿತರು ಮತ್ತು ದುರ್ಬಲ ವರ್ಗಗಳ ಸರ್ಕಾರವಾಗಿರುತ್ತದೆ. ಎಲ್ಲಾ ಸಮುದಾಯಗಳ ಪ್ರಾತಿನಿಧ್ಯವನ್ನು ಹೊಂದಿರುತ್ತದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

‘ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯ ನಳಂದದಲ್ಲಿ ತಲೆ ಎತ್ತಲಿದೆ’ಎಂದೂ ಅವರು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.