ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಧನಕರ್ ಅಣಕ | ರಾಹುಲ್‌ ಗಾಂಧಿ ಸಂಸದರಾಗಲು ಯೋಗ್ಯರಲ್ಲ: ವಿಜಯವರ್ಗಿಯ

Published 22 ಡಿಸೆಂಬರ್ 2023, 2:41 IST
Last Updated 22 ಡಿಸೆಂಬರ್ 2023, 2:41 IST
ಅಕ್ಷರ ಗಾತ್ರ

ಇಂದೋರ್‌: ಸಂಸತ್ತಿನ ಆವರಣದಲ್ಲಿ ಸಂಸದರೊಬ್ಬರು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ಅಣಕಿಸುವುದನ್ನು ಚಿತ್ರೀಕರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ರಾಹುಲ್‌ ಗಾಂಧಿ ಸಂಸತ್ತಿನ ಸದಸ್ಯರಾಗಲು ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಪ್ರತಿಭಟನೆ ನಡೆಸುವ ವೇಳೆ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್‌ ಬ್ಯಾನರ್ಜಿ ಅವರು ಜಗದೀಪ್‌ ಅವರನ್ನು ಅಣಕಿಸಿದ್ದರು. ಅದನ್ನು ಕಾಂಗ್ರೆಸ್‌ ಮುಖಂಡ ರಾಯಲ್‌ ಗಾಂಧಿ ಚಿತ್ರೀಕರಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯವರ್ಗಿಯ, ‘ರಾಜ್ಯಸಭಾಧ್ಯಕ್ಷರೂ ಆಗಿರುವ ಉಪರಾಷ್ಟ್ರಪತಿ ಧನಕರ್‌ ಅವರನ್ನು ಬ್ಯಾನರ್ಜಿ ಅವರು ಸಂಸತ್ತಿನ ಆವರಣದಲ್ಲಿ ಅಣಕಿಸುತ್ತಿದ್ದರೆ, ಅದನ್ನು ನಿಲ್ಲಿಸುವ ಬದಲು ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸುತ್ತಿದ್ದರು. ಇದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂದು ಹೇಳಲಾಗುತ್ತದೆ. ಆದರೆ, ಅವರು ಸಂಸದ ಸ್ಥಾನಕ್ಕೂ ಯೋಗ್ಯರಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವಿಜಯವರ್ಗಿಯ ಹೇಳಿದರು. ಸಂಸದರ ಅಮಾನತು ಕುರಿತು ಪ್ರತಿಕ್ರಿಯಿಸಿದ ಅವರು ‘ಬೀದಿಗಳಲ್ಲಿ ಆಂದೋಲನ ನಡೆಸಬೇಕು, ಆದರೆ ದುರದೃಷ್ಟವಶಾತ್‌ ಪ್ರತಿಪಕ್ಷದ ಕೆಲವರು ಸಂಸತ್ತಿನೊಳಗೆ ಧರಣಿ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT