ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಸಿಕ್‌: ತ್ರಯಂಬಕೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಹುಲ್‌

Published 14 ಮಾರ್ಚ್ 2024, 13:34 IST
Last Updated 14 ಮಾರ್ಚ್ 2024, 13:34 IST
ಅಕ್ಷರ ಗಾತ್ರ

ನಾಸಿಕ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ದೇವಾಲಯಕ್ಕೆ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ದೇಶದಲ್ಲಿನ 12 ಜ್ಯೋತಿರ್ಲಿಂಗಗಳಲ್ಲಿ ತ್ರಯಂಬಕೇಶ್ವರ ದೇವಾಲಯ ಕೂಡ ಒಂದು.

ರಾಹುಲ್‌ ನೇತೃತ್ವದ ಭಾರತ್‌ ಜೋಡೊ ನ್ಯಾಯ ಯಾತ್ರೆ ಗುರುವಾರ ಮಧ್ಯಾಹ್ನ ನಾಸಿಕ್‌ ತಲುಪಿದೆ.

ಇದಕ್ಕೂ ಮುನ್ನ ಗುರುವಾರ ಬೆಳಿಗ್ಗೆ ಚಾಂದ್‌ವಾಡ್‌ನಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ರೈತರ ಧ್ವನಿಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT