ನವದೆಹಲಿ: ಮೈಸೂರಿನಲ್ಲಿ ಮಳೆಯ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಷಣ ಮಾಡಿರುವ ವಿಡಿಯೊ ಹಾಗೂ ಫೋಟೊಗಳು ವೈರಲ್ ಆಗಿವೆ.

ಮಳೆಯಲ್ಲಿ ಭಾಷಣ ಮಾಡುತ್ತಿರುವ ರಾಹುಲ್ ಹಾಗೂ ಶರದ್ ಪವಾರ್ ಫೋಟೊಗಳನ್ನು ಹಂಚಿಕೊಂಡಿರುವ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ‘ಈ ಹಿಂದೆ ಸಮಯವು ಸಾಬೀತುಪಡಿಸಿದೆ. ಮುಂದೆಯೂ ಸಾಬೀತುಪಡಿಸಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.

‘ವರುಣದೇವ ನಿಮ್ಮನ್ನು ಆಶೀರ್ವದಿಸಲು ನಿರ್ಧರಿಸಿದಾಗ, ಶೀಘ್ರದಲ್ಲೇ ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಬಿರುಗಾಳಿ ಬೀಸಲಿದೆ’ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೊ’ ಪಾದಯಾತ್ರೆಯು ಭಾನುವಾರ ಜೋರು ಮಳೆಯಲ್ಲಿ ನಡೆಯಿತು.

ನಂಜನಗೂಡು ತಾಲ್ಲೂಕು ಕಡಕೊಳದ ಕಾಳಿಬೀರಮ್ಮ ದೇವಸ್ಥಾನದ ಬಳಿಯಿಂದ 4.46ಕ್ಕೆ ಹೊರಟ ಪಾದಯಾತ್ರೆಯಲ್ಲಿ 25ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ರಾಹುಲ್ ಜೊತೆ ನಾಯಕರೂ ಹೆಜ್ಜೆ ಹಾಕಿದರು. ಸಂಜೆ 6.40ರ ಸುಮಾರಿಗೆ ಬಂಡೀಪಾಳ್ಯ ಸಮೀಪಿಸುತ್ತಿದ್ದಂತೆಯೇ ಜೋರು ಮಳೆ ಆರಂಭವಾಯಿತು.

ಎಪಿಎಂಸಿ ಸಮೀಪ ಮಳೆಯಲ್ಲೇ ಭಾಷಣ ಮಾಡಿದ ರಾಹುಲ್, ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇನೆ. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ’ ಎಂದು ಪ್ರಶ್ನಿಸಿದರು.

‘ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಯಾತ್ರೆ ನಡೆಯಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನದಿಗಳು ಹರಿಯುವಂತೆಯೇ ಮುಂದುವರಿಯುತ್ತದೆ. ಇಲ್ಲಿ, ಯಾವುದೇ ದ್ವೇಷ–ಅಸೂಯೆ ಕಾಣುವುದಿಲ್ಲ. ಕೇವಲ ಪ್ರೀತಿ–ಸಹನೆಯ ಸಂದೇಶವನ್ನಷ್ಟೆ ನೀಡಲಾಗುತ್ತಿದೆ. ಇದೇ ನಮ್ಮ ದೇಶದ ಸಂಸ್ಕೃತಿಯಾಗಿದೆ’ ಎಂದರು.

ಇವನ್ನೂ ಓದಿ...

ಜೋಡೊ ಯಾತ್ರೆ: ‘ಜೋಡಿ’ಸಿದ ರಸ್ತೆ, ವೈಷಮ್ಯ ನಿವಾರಣೆ ಯತ್ನ– ವಿಶೇಷ ವರದಿ

ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ: ಸಿದ್ದರಾಮಯ್ಯ

ನಾವೂ ಪೇಸಿಎಂ ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ, ಏನ್ಮಾಡ್ಕೊತಿರಾ?: ಡಿಕೆಶಿ

ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ: ಸಿದ್ದರಾಮಯ್ಯ ಆಕ್ರೋಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.