ಜಾರ್ಖಂಡ್ನ ಸಾಹಿಬ್ಗಂಜ್ನಲ್ಲಿ ಗುರುವಾರ ಜನರನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕರೊಬ್ಬರು ಯುವತಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಹತ್ಯೆ ಯತ್ನ ಮಾಡಿದ್ದರಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ದೇಶದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸಿದ್ದರು. ಆ ಸಂದರ್ಭದಲ್ಲಿ, ನರೇಂದ್ರ ಮೋದಿಯವರು ‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ಈಚಿನ ದಿನಗಳಲ್ಲಿ ನೀವು ಎಲ್ಲೇ ನೋಡಿದರೂ ‘ರೇಪ್ ಇನ್ ಇಂಡಿಯಾ’ ಆಗಿದೆ ಎಂದು ಟೀಕಿಸಿದ್ದರು.