ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಯನಾಡ್‌ ಲೋಕಸಭಾ ಸ್ಥಾನ: ರಾಹುಲ್‌ ರಾಜೀನಾಮೆ

Published 18 ಜೂನ್ 2024, 16:33 IST
Last Updated 18 ಜೂನ್ 2024, 16:33 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಲೋಕಸಭಾ ಸಚಿವಾಲಯ ಮಂಗಳವಾರ ಹೇಳಿದೆ.

ರಾಹುಲ್‌ ಅವರು ವಯನಾಡ್‌ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪ್ರಕಟಿಸಿದ್ದರು.

ರಾಹುಲ್‌ ರಾಜೀನಾಮೆಯಿಂದ ತೆರವಾಗಿರುವ ವಯನಾಡ್‌ ಕ್ಷೇತ್ರದಲ್ಲಿ, ಅವರ ಸಹೋದರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 99 ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಹುಲ್‌ ರಾಜೀನಾಮೆಯಿಂದಾಗಿ ಇದೀಗ ಒಂದು ಸ್ಥಾನ ಕಡಿಮೆಯಾಗಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT