ಹೈದರಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ತಿರುಚಿದ ಭಾವಚಿತ್ರವನ್ನು ಸ್ಯಾನಿಟರಿ ಪ್ಯಾಡ್ನಲ್ಲಿ ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪದಡಿ ಹಾಸ್ಯನಟ, ಯೂಟ್ಯೂಬರ್ ರತನ್ ರಂಜನ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

'ರಂಜನ್ ಮತ್ತು ಇತರರು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಹರಡುತ್ತಿದ್ದಾರೆ' ಎಂದು ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವ ಚರಣ್ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
.ಫರಂಗಿಪೇಟೆ: ಮದುವೆಗೆ ನಿರಾಕರಿಸಿದ ಯುವತಿಗೆ ಇರಿದು ಯುವಕ ಆತ್ಮಹತ್ಯೆ.ಸುಬ್ರತೊ ದಾಸ್ ಪತ್ನಿಗೆ ಚುಚ್ಚುಮದ್ದು ನೀಡಲು ನಿರಾಕರಣೆ: ವೈದ್ಯೆ ಅಮಾನತು.
ರಂಜನ್ ತಿರುಚಿದ ಮಾಡಿದ ರಾಹುಲ್ ಚಿತ್ರವನ್ನು ಮಾಡಿ ಸ್ಯಾನಿಟರಿ ಪ್ಯಾಡ್ ಒಳಗೆ ಇಟ್ಟು ಪೋಸ್ಟ್ ಮಾಡಿದ್ದಾರೆ. ಮಹಿಳೆಯರ ಘನತೆಯನ್ನು ಕೆರಳಿಸಿದ್ದಾರೆ ಹಾಗೂ ಮಹಿಳೆಯರ ಆರೋಗ್ಯದ ಸಮಸ್ಯೆಯನ್ನು ಕ್ಷುಲ್ಲಕಗೊಳಿಸಿದ್ದಾರೆ ಎಂದು ರೆಡ್ಡಿ ದೂರಿನಲ್ಲಿ. ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಇತ್ತೀಚೆಗೆ ಬಿಹಾರದ ಬಡ ಮಹಿಳೆಯರಿಗೆ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಅಭಿಯಾನವನ್ನು ಪ್ರಾರಂಭಿಸಿತ್ತು. ಈ ಅಭಿಯಾನವನ್ನು ಗುರಿಯಾಗಿಸಿಕೊಂಡು ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.
.ಕಲಬುರಗಿ: ಮದ್ಯಕ್ಕೆ ಹಣ ಕೊಡದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ.ಸಂವಿಧಾನ ಪೀಠಿಕೆ ತಂದೆ–ತಾಯಿ ಇದ್ದಂತೆ, ಬದಲಾಯಿಸಲು ಸಾಧ್ಯವಿಲ್ಲ: ಜಗದೀಪ್ ಧನಕರ್.
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಹರಿದಾಡಿದ್ದು, ಅನೇಕರು ಅದೇ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬೇಗಂ ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.