ನವದೆಹಲಿ: ‘ದೇಶದಲ್ಲಿ ನಿಧಾನಗತಿಯಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

‘ದೇಶದ ಜನತೆಯ ಮನದ ಮಾತು ಅರ್ಥೈಸಿಕೊಂಡಿದ್ದರೆ ಇಂತಹ ಪರಿಸ್ಥಿತಿ ಇರುತ್ತಿರಲಿಲ್ಲ. ಲಸಿಕೆಗಳು ಎಲ್ಲಿವೆ’ ಎಂದು ಪ್ರಶ್ನಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ.

ಲಸಿಕಾ ಅಭಿಯಾನ ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ವಿಡಿಯೊ ಮತ್ತು ಮಾಧ್ಯಮ ವರದಿಗಳನ್ನು ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ವೈರಸ್ ಮೂರನೇ ಅಲೆಯನ್ನು ತಡೆಯಲು ಮತ್ತು 2021ರ ಡಿಸೆಂಬರ್ ವೇಳೆಗೆ ಶೇಕಡ 60ರಷ್ಟು ಜನಸಂಖ್ಯೆಗೆ ಲಸಿಕೆ ಹಾಕುವ ಗುರಿಯನ್ನು ಒಳಗೊಂಡಿರುವ ವಿಷಯಗಳು ವಿಡಿಯೊದಲ್ಲಿವೆ.

ಸರ್ಕಾರ ನಿಗದಿಪಡಿಸಿರುವ ಗುರಿ ಅನ್ವಯ, ಪ್ರತಿ ದಿನ 93 ಲಕ್ಷ ಮಂದಿಗೆ ಲಸಿಕೆ ಹಾಕುವುದು ಅಗತ್ಯವಿದೆ. ಆದರೆ, ಕಳೆದ ಏಳು ದಿನಗಳಲ್ಲಿ ಪ್ರತಿ ದಿನ 36 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ. ಜುಲೈ 24ರಂದು 23 ಲಕ್ಷ ಮಂದಿಗೆ ಮಾತ್ರ ಲಸಿಕೆ ಹಾಕಲಾಗಿದೆ ಎನ್ನುವ ವಿವರಗಳನ್ನು ಒಳಗೊಂಡಿರುವ ಗ್ರಾಫ್ ವಿಡಿಯೊದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.