ನವದೆಹಲಿ: ಸಿಬಿಎಸ್ಇ ವಿವಾದಗಳ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಪ್ರಧಾನಿಗೆ ಲಕ್ಷಾಂತರ ಮಕ್ಕಳ ಭವಿಷ್ಯದ ಕುರಿತು ಚಿಂತೆ ಇಲ್ಲ, ಸರ್ಕಾರದ ಅಸ್ತಿತ್ವದ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದಾರೆ' ಎಂದು ದೂರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, 'ದೇಶದ ಯುವಜನರಿಗೆ ಸತ್ಯ ಗೊತ್ತಾಗಬೇಕು. ಈ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ.

ಸಿಬಿಎಸ್ಇ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೌನವನ್ನು ಪ್ರಶ್ನಿಸಿರುವ ರಾಹುಲ್, 'ಮೊದಲ ದಿನದಿಂದಲೂ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.

'18.5 ಲಕ್ಷ ಮಕ್ಕಳ ಭವಿಷ್ಯವನ್ನು ಹಾಳು ಮಾಡಲಾಗಿದೆ. COEMPT ಕಂಪನಿಗೆ ಗುತ್ತಿಗೆ ನೀಡಿರುವುದರಲ್ಲಿ ಅಕ್ರಮ ನಡೆದಿದೆ' ಎಂದು ರಾಹುಲ್ ಆರೋಪಿಸಿದ್ದಾರೆ.
.ಸಿಬಿಎಸ್ಇ | ಧರ್ಮೇಂದ್ರ ಪ್ರಧಾನ್–ರಾಹುಲ್ ಗಾಂಧಿ ನಡುವೆ ಆರೋಪ–ಪ್ರತ್ಯಾರೋಪ.ಸಿಬಿಎಸ್ಇ | ತಪ್ಪೆಸಗಿದ ಕಂಪನಿಗೇಕೆ ಮತ್ತೆ ‘ಒಎಸ್ಎಂ’ ಒಪ್ಪಂದ: ರಾಹುಲ್ ಪ್ರಶ್ನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.