ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಸಮನ್ಸ್

Published 16 ಡಿಸೆಂಬರ್ 2023, 15:52 IST
Last Updated 16 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಸುಲ್ತಾನ್‌ಪುರ(ಉತ್ತರಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಜನವರಿ 6ರಂದು ವಿಚಾರಣೆಗೆ ಹಾಜರಾಗುವಂತೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಮುಖಂಡ ವಿಜಯ್‌ ಮಿಶ್ರಾ ಅವರು 2018 ಆಗಸ್ಟ್‌ 4ರಂದು ರಾಹುಲ್‌ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ವಿಚಾರಣೆಗೆ ಶನಿವಾರ ಹಾಜರಾಗುವಂತೆ ನ್ಯಾಯಾಲಯವು ರಾಹುಲ್‌ ಅವರಿಗೆ ಈ ಹಿಂದೆ ನಿರ್ದೇಶನ ನೀಡಿತ್ತು. ಆದರೆ ಅವರು ಹಾಜರಾಗಲಿಲ್ಲ ಎಂದು ಮಿಶ್ರಾ ಪರ ವಕೀಲರು ತಿಳಿಸಿದ್ದಾರೆ.

ಹನುಮಗಂಜ್‌ ನಿವಾಸಿಯಾಗಿರುವ ಮಿಶ್ರಾ ಅವರು ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT