ಪಟ್ನಾ: ಎನ್ಎಸ್ಯುಐ ಉಸ್ತುವಾರಿ ಕನ್ಹಯ್ಯ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಪಾಲ್ಗೊಳ್ಳಲಿದ್ದಾರೆ.

‘ನಿರುದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಹಮ್ಮಿಕೊಳ್ಳಲಾದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ನಾನು ಬಿಹಾರದ ಬೆಗೂಸರಾಯಕ್ಕೆ ಬರುತ್ತಿದ್ದೇನೆ. ಉದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಸರ್ಕಾರದ ಬಣ್ಣ ಬಯಲು ಮಾಡಲು ಬಿಳಿ ಅಂಗಿ ತೊಟ್ಟು ಈ ಚಳವಳಿಯಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಭಾನುವಾರ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಹಾರದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಜೇಶ್ ಕುಮಾರ್, ‘ಸೋಮವಾರ ಬೆಳಿಗ್ಗೆ ಪಟ್ನಾ ವಿಮಾನ ನಿಲ್ದಾಣಕ್ಕೆ ಬರಲಿರುವ ರಾಹುಲ್ ಗಾಂಧಿ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಬೆಗೂಸರಾಯಕ್ಕೆ ತೆರಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಉದ್ಯೋಗ ಮತ್ತು ವಲಸೆ ವಿಚಾರಗಳನ್ನು ಮುಂದಿಟ್ಟುಕೊಂಡು ಕನ್ಹಯ್ಯ ಕುಮಾರ್ ಮಾರ್ಚ್ 16ರಿಂದ ರಾಜ್ಯದಾದ್ಯಂತ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.