ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುರೋಪ್ ಪ್ರವಾಸ: ಫ್ರಾನ್ಸ್ ಕಾರ್ಮಿಕ ಒಕ್ಕೂಟ, ವಿದ್ಯಾರ್ಥಿಗಳೊಂದಿಗೆ ರಾಹುಲ್ ಮಾತು

Published 29 ಆಗಸ್ಟ್ 2023, 13:27 IST
Last Updated 29 ಆಗಸ್ಟ್ 2023, 13:27 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್‌ನಲ್ಲಿ ಯುರೋಪ್‌ಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಪ್ರವಾಸದ ಸಂದರ್ಭದಲ್ಲಿ ಅವರು ಪ್ಯಾರಿಸ್‌ನ ವಿಶ್ವವಿದ್ಯಾಲಯವೊಂದರಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ, ಬೆಲ್ಜಿಯಂನಲ್ಲಿರುವ ಯುರೋಪಿಯನ್ ಕಮಿಷನ್, ಶಾಸಕರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ.

ಒಟ್ಟು ಐದು ದಿನಗಳ ಕಾಲ ರಾಹುಲ್ ಕುಟುಂಬದವರು ಯುರೋಪ್ ಪ್ರವಾಸ ಕೈಗೊಂಡಿದ್ದು, ಸೆ. 7ರಂದು ಬ್ರಸೆಲ್ಸ್‌ನಲ್ಲಿ ರಾಹುಲ್ ಅವರು ಯುರೋಪಿಯನ್ ಒಕ್ಕೂಟದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಸೆ. 8ರಂದು ಪ್ಯಾರಿಸ್‌ನ ವಿಶ್ವವಿದ್ಯಾಲಯವೊಂದರಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉಪನ್ಯಾಸ ನೀಡುವರು. 9ರಂದು ಪ್ಯಾರಿಸ್‌ನಲ್ಲಿ ಫ್ರಾನ್ಸ್‌ನ ಕಾರ್ಮಿಕ ಒಕ್ಕೂಟದೊಂದಿಗೆ ಸಭೆಯೊಂದರಲ್ಲಿ ಪಾಲ್ಗೊಳ್ಳುವರು ಎಂದೂ ಮೂಲಗಳು ತಿಳಿಸಿವೆ.

ಸೆ.10ರಂದು ನಾರ್ವೆಯಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡುವರು. ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT