ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Rahul Gandhi Birthday | ಭಾವನಾತ್ಮಕ ಸಂದೇಶ ಹಂಚಿದ ಸೋದರಿ ಪ್ರಿಯಾಂಕಾ

Published 19 ಜೂನ್ 2024, 7:23 IST
Last Updated 19 ಜೂನ್ 2024, 7:23 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, 54ನೇ ವರ್ಷದ (ಜೂನ್ 19) ಸಂಭ್ರಮದಲ್ಲಿದ್ದಾರೆ.

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ರಾಜಕೀಯ ಸೇರಿದಂತೆ ಗಣ್ಯರು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ಕೋರಿದ್ದಾರೆ.

ಸಹೋದರಿ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ ಹಂಚಿದ್ದು, ರಾಹುಲ್ ಗಾಂಧಿ ಅವರನ್ನು 'ನನ್ನ ಗೆಳೆಯ, ವಾದಪ್ರಿಯ ಮಾರ್ಗದರ್ಶಕ, ತತ್ವಜ್ಞಾನಿ ಮತ್ತು ನಾಯಕ' ಎಂದು ಸಂಬೋಧಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

'ಬಡವರಿಗೆ ಬಂಧು, ರಾಜಕಾರಣಿಗಳಿಗೆ ಆದರ್ಶ ನಾಯಕ, ಯುವಜನರಿಗೆ ಸ್ಫೂರ್ತಿಯಾಗಿರುವ ದೇಶದ ಆಶಾಕಿರಣ ಮತ್ತು ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಸೈದ್ಧಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ಕಠಿಣಶ್ರಮದ ಮೌಲ್ಯಗಳನ್ನು ಅಳವಡಿಸಿಕೊಂಡು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತ ದುಡಿದರೆ ಕಾಂಗ್ರೆಸ್ ಪಕ್ಷ ಮತ್ತೆ ಗತವೈಭವದ ದಿನಗಳಿಗೆ ಮರಳುವುದರಲ್ಲಿ ಯಾವುದೇ ಸಂಶಯ ಇಲ್ಲ. ನಿಮಗೆ ಭಗವಂತ ಆಯುಷ್ಯ-ಆರೋಗ್ಯವನ್ನು ದಯಪಾಲಿಸಲಿ' ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ರಾಹುಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ದೇಶಕ್ಕೆ ಸೇವೆ ಸಲ್ಲಿಸುವ ನಿಮ್ಮ ಬದ್ಧತೆ ಮತ್ತು ಉತ್ಸಾಹ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT