ರಾಯ್ಬರೇಲಿ: ತಮ್ಮ ಲೋಕಸಭಾ ಕ್ಷೇತ್ರ ರಾಯ್ಬರೇಲಿಗೆ ಎರಡು ದಿನಗಳ ಭೇಟಿ ಕೈಗೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಬೆಲೆ ಏರಿಕೆ ಸೇರಿದಂತೆ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯತ್ನಿಸುತ್ತಿದೆ' ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಚುರುವಾ ಗಡಿಯಲ್ಲಿ ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಬಛ್ರಾಂವದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು.

'ಹಣದುಬ್ಬರ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಮೋದಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.

ಏತನ್ಮಧ್ಯೆ, ರಾಹುಲ್ ಗಾಂಧಿ ಅವರ ಭೇಟಿಯ ವೇಳೆ ಪಕ್ಷದ ಕೆಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. 'ಸಾರ್ವಜನಿಕರ ತೊಂದರೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವುದು ರಾಹುಲ್ ಗಾಂಧಿ ಅವರ ಕರ್ತವ್ಯವಾಗಿದೆ' ಎಂದು ಬಿಜೆಪಿ ನಾಯಕ ಪ್ರವೇಶ್ ವರ್ಮಾ ಹೇಳಿದ್ದಾರೆ.
.ಮಧ್ಯರಾತ್ರಿ ನೂತನ CEC ನೇಮಕ: ಅಗೌರವ ಎಂದ ರಾಹುಲ್ ಗಾಂಧಿ.ನಿಮಗೆ ಅನುಕೂಲವಾಗುವ ಭಾಷೆಯಲ್ಲೇ ಮಾತನಾಡಿ: ಸಂಸದರಿಗೆ ರಾಹುಲ್ ಗಾಂಧಿ ಸಲಹೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.