ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಸ್ಪರ್ಧೆ ಫಲಿತಾಂಶವನ್ನೇ ಬದಲಿಸಲಿದೆ: ಉ.ಪ್ರ ಕಾಂಗ್ರೆಸ್ ಅಧ್ಯಕ್ಷ

Published 3 ಮೇ 2024, 5:12 IST
Last Updated 3 ಮೇ 2024, 5:12 IST
ಅಕ್ಷರ ಗಾತ್ರ

ವಾರಾಣಸಿ (ಉತ್ತರ ಪ್ರದೇಶ): ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದು ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ಅಜಯ್‌ ರಾಯ್‌ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ‘ರಾಹುಲ್ ಗಾಂಧಿಯವರು ಉತ್ತರ ಪ್ರದೇಶದಿಂದಲೇ ಸ್ಪರ್ಧೆ ಮಾಡಬೇಕು ಎನ್ನುವುದು ನಮ್ಮ ಬೇಡಿಕೆಯಾಗಿತ್ತು. ರಾಯ್‌ಬರೇಲಿ ಹಾಗೂ ಅಮೇಠಿಯಿಂದ ಗಾಂಧಿ ಕುಟುಂಬದವರು ಸ್ಪರ್ಧೆ ಮಾಡಬೇಕು ಎಂದು ನಾವು ಬಯಸಿದ್ದೇವು’ ಎಂದು ಹೇಳಿದ್ದಾರೆ.

ಈಗ ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ, ಅಮೇಠಿಯಿಂದ ಕೆ.ಎಲ್‌ ಶರ್ಮಾ ಸ್ಪರ್ಧಿಸುತ್ತಿದ್ದಾರೆ. ಅವರು ಜನರೊಂದಿಗೇ ಇದ್ದು, ಜನರ ಸೇವೆ ಮಾಡಿದವರು. ರಾಹುಲ್ ಗಾಂಧಿಯವರ ಸ್ಪರ್ಧೆ ಇಡೀ ಚುನಾವಣೆಯ ಫಲಿತಾಂಶವನ್ನೇ ಬದಲಿಸಲಿದೆ. ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸುವುದು ಖಚಿತ. ರಾಹುಲ್ ಗಾಂಧಿ ಓಬ್ಬ ಹೋರಾಟಗಾರ. ಅವರನ್ನು ಹಿಂಸೆ ಸರಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT