ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ: ಕಾಂಗ್ರೆಸ್‌

Published 31 ಜನವರಿ 2024, 9:31 IST
Last Updated 31 ಜನವರಿ 2024, 9:31 IST
ಅಕ್ಷರ ಗಾತ್ರ

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿಗೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್‌ ಚೌಧರಿ ಆರೋಪಿಸಿದ್ದಾರೆ.‌

ಭಾರತ್ ಜೋಡೊ ನ್ಯಾಯ ಯಾತ್ರೆ ಅಂಗವಾಗಿ ರಾಹುಲ್ ಗಾಂಧಿ ಮಾಲ್ಡಾಗೆ ತೆರಳಿದ್ದರು.

‘ಕಲ್ಲು ತೂರಾಟದಿಂದ ಕಾರಿನ ಹಿಂಬದಿ ಕಿಟಕಿಯ ಗಾಜು ಜಖಂಗೊಂಡಿದ್ದು, ರಾಹುಲ್ ಗಾಂಧಿಗೆ ಯಾವುದೇ ಗಾಯಗಳಾಗಿಲ್ಲ’ ಎಂದು ಅವರು ಹೇಳಿದರು.

ಯಾತ್ರೆಯು ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ. ರಾಹುಲ್ ಗಾಂಧಿ ಅವರು ಕಾರನ್ನು ಪರೀಕ್ಷಿಸುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT