ವಯನಾಡ್: ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ಸಂಘಟನೆಯಾದ ಎಸ್ಎಫ್ಐ ವತಿಯಿಂದ ಇಲ್ಲಿನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಗೆ ಶುಕ್ರವಾರ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನನಿರತರ ಗುಂಪು ಸಂಸದರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದೆ.

‘ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕೆಲವರು ಸಂಸದರ ಕಚೇರಿಗೆ ನುಗ್ಗಿದ್ದಾರೆ. ಈ ಸಂಬಂಧ ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಯ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ಗುಡ್ಡಗಾಡು ಪ್ರದೇಶಗಳ ಅರಣ್ಯದಲ್ಲಿ ಬಫರ್ ವಲಯ ರಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸುವಲ್ಲಿ ರಾಹುಲ್ ಗಾಂಧಿ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಎಸ್ಎಫ್ಐ ಪ್ರತಿಭಟನೆ ನಡೆಸಿದೆ.

ಪ್ರತಿಭಟನಕಾರರು ಸಂಸದರ ಕಚೇರಿಯೊಳಗೆ ದಾಂಧಲೆ ನಡೆಸುತ್ತಿರುವ ದೃಶ್ಯಗಳನ್ನು ಟಿ.ವಿ ವಾಹಿನಿಗಳು ಪ್ರಸಾರ ಮಾಡಿವೆ.

ಇದನ್ನೂ ಓದಿ–ಹೊಸ ಕಾರ್ಮಿಕ ನೀತಿ: ವಾರಕ್ಕೆ 4 ದಿನ, 12 ಗಂಟೆ ಕೆಲಸ–ಜುಲೈ 1ರಿಂದ ಜಾರಿ?

ಘಟನೆಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ‘ಸಂಸದರ ಕಚೇರಿಯಲ್ಲಿ ದಾಂಧಲೆ ನಡೆಸಿರುವುದು ಅನ್ಯಾಯ ಮತ್ತು ಗೂಂಡಾ ವರ್ತನೆ’ ಎಂದು ಟ್ವೀಟ್ ಮಾಡಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ

ರಾಹುಲ್ ಗಾಂಧಿ ಅವರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿರುವ ಪ್ರಕರಣವನ್ನು ಖಂಡಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಇಂತಹ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದುಕೊಳ್ಳುವುದು ತಪ್ಪು ಪ್ರವೃತ್ತಿ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.