ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ‘ಮಹಾರ‍್ಯಾಲಿ’ಯಲ್ಲಿ ‘ಇಂಡಿಯಾ’ ನಾಯಕರು

Published 29 ಮಾರ್ಚ್ 2024, 14:30 IST
Last Updated 29 ಮಾರ್ಚ್ 2024, 14:30 IST
ಅಕ್ಷರ ಗಾತ್ರ

ನವದೆಹಲಿ: ಎಎಪಿ ಮಾ.31ರಂದು ಆಯೋಜಿಸಿರುವ ‘ಮಹಾರ‍್ಯಾಲಿ’ಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಪ್ರಮುಖ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್‌ ಪವಾರ್‌, ಉದ್ಧವ್‌ ಠಾಕ್ರೆ, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಗೋಪಾಲ್‌ ರಾಯ್‌ ತಿಳಿಸಿದರು.

ಡೆರೆಕ್‌ ಒಬ್ರಾಯನ್, ತ್ರಿಚಿ ಶಿವ, ಫಾರೂಕ್‌ ಅಬ್ದುಲ್ಲಾ ಮತ್ತು ಜಾರ್ಖಂಡ್‌ ಮುಖ್ಯಮಂತ್ರಿ ಚಂಪೈ ಸೊರೇನ್‌ ಹಾಗೂ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಪತ್ನಿ ಕಲ್ಪನಾ ಸೊರೇನ್ ಸಹ ಭಾಗಿಯಾಗಲಿದ್ದಾರೆ ಎಂದರು.

ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ರಾಮಲೀಲಾ ಮೈದಾನದಲ್ಲಿ ರ‍್ಯಾಲಿ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿದೆ. ಕಾರ್ಯಕ್ರಮದಲ್ಲಿ 20,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT