ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೇಠಿಯಿಂದ ರಾಹುಲ್‌ ಸ್ಪರ್ಧೆ ಸಾಧ್ಯತೆ

Published 2 ಮೇ 2024, 16:44 IST
Last Updated 2 ಮೇ 2024, 16:44 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಅಮೇಠಿ ಮತ್ತು ರಾಯಬರೇಲಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಕುತೂಹಲ ಮುಂದುವರಿದಿದೆ. ರಾಹುಲ್ ಗಾಂಧಿ ಅವರು ಕಳೆದ ಬಾರಿ ಸೋತಿದ್ದ ಅಮೇಠಿ ಸ್ಥಾನದಿಂದ ಮತ್ತೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ಹೇಳಿವೆ.

ಈ ಎರಡು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಸಂಬಂಧಿಸಿದಂತೆ ಪಕ್ಷವು ತಯಾರಿ ನಡೆಸಿದೆ. ಅಮೇಠಿಯಿಂದ ರಾಹುಲ್‌ ಕಣಕ್ಕಿಳಿಯುವ ಸಾಧ್ಯತೆಯೇ ಅಧಿಕ ಎಂದು ಮೂಲಗಳು ತಿಳಿಸಿವೆ. 2019ರ ಚುನಾವಣೆಯಲ್ಲಿ ಅವರು ಬಿಜೆಪಿಯ ಸ್ಮೃತಿ ಇರಾನಿ ಎದುರು ಸೋತಿದ್ದರು.

ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಹಾಜರಿರಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದರು.

ರಾಯಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಣಕ್ಕಿಳಿಯದಿದ್ದರೆ, ಕಾಂಗ್ರೆಸ್‌ ನಾಯಕಿ ದಿವಂಗತ ಶೀಲಾ ಕೌಲ್‌ ಅವರ ಮೊಮ್ಮಗನನ್ನು ಕಣಕ್ಕಿಸುವ ಚಿಂತನೆಯೂ ನಡೆದಿದೆ.

ನಾಮಪತ್ರ ಸಲ್ಲಿಕೆಯ ಸಿದ್ಧತೆಯ ಅಂಗವಾಗಿ, ರಾಹುಲ್‌ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರ ಚಿತ್ರಗಳನ್ನು ಒಳಗೊಂಡ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಗುರುವಾರ ಸಂಜೆ ಅಮೇಠಿಯ ಗೌರಿಗಂಜ್‌ನಲ್ಲಿರುವ ಪಕ್ಷದ ಕಚೇರಿಗೆ ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT