ರಾಯ್ಬರೇಲಿ: ಉತ್ತರ ಪ್ರದೇಶದ ರಾಯ್ಬರೇಲಿಗೆ ಎರಡು ದಿನಗಳ ಭೇಟಿ ನೀಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಪಕ್ಷದ ಕಾರ್ಯಕರ್ತರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ರಾಹುಲ್ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಯ್ ಬರೇಲಿಯ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಸುನಿಲ್ ಕುಮಾರ್ ಗೌತಮ್, ‘ಸಮುದಾಯದ 12 ಸದಸ್ಯರ ನಿಯೋಗವು ರಾಹುಲ್ ಅವರನ್ನು ಭೂಮೌ ನಿವಾಸದಲ್ಲಿ ಭೇಟಿಯಾಯಿತು. ಪರಿಶಿಷ್ಟ ಜಾತಿ ಸಮುದಾಯದ ಸಮಸ್ಯೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಅವರಿಗೆ ತಿಳಿಸಿದ್ದೇವೆ’ ಎಂದು ಹೇಳಿದ್ದಾರೆ.

ಪಕ್ಷದ ಸಂಘಟನೆಯನ್ನು ಬಲಪಡಿಸುವುದರೊಂದಿಗೆ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸುವ ಕುರಿತು ಕಾರ್ಯಕರ್ತರಿಗೆ ರಾಹುಲ್ ಗಾಂಧಿ ನಿರ್ದೇಶಿಸಿದ್ದಾರೆ ಎಂದು ಗೌತಮ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.