ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಬೆಳಿಗ್ಗೆ ಭೂಕುಸಿತಕ್ಕೆ ತುತ್ತಾಗಿರುವ ವಯನಾಡ್ಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂದಿ ಮತ್ತು ಪ್ರಿಯಾಂಕಾ ಗಾಂಧಿ ಅವರು ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಯುಡಿಎಫ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ವಯನಾಡ್ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದ ರಾಹುಲ್ ಗಾಂಧಿ ಅವರು ‘ಎಕ್ಸ್’ನಲ್ಲಿ, ‘ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಅವಘಡದಲ್ಲಿ ಸಿಲುಕಿರುವವರನ್ನು ಶೀಘ್ರವೇ ರಕ್ಷಿಸಲಾಗುವುದು ಎಂದು ಎಂದು ಭಾವಿಸಿದ್ದೇನೆ’ ಎಂದು ಹೇಳಿದ್ದಾರೆ.

‘ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸುತ್ತೇನೆ ಮತ್ತು ವಯನಾಡ್ಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.