ಕೋಲ್ಕತ್ತ: ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಳಿಕ ದೇಶಾದ್ಯಂತ ವೈದ್ಯಕೀಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಈ ಘಟನೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಈ ಪ್ರಕರಣ ನಿಭಾಯಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಈ ಘಟನೆ ಬಳಿಕ ವೈದ್ಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಕಾಲೇಜಿನಂತಹ ಸ್ಥಳಗಳಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ ಹೇಗೆ? ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಅಧ್ಯಯನಕ್ಕಾಗಿ ಹೊರಗೆ ಹೇಗೆ ಕಳುಹಿಸಬಹುದು? ಎಂದು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದರು.

ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಇದು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.

ಈ ಪ್ರಕರಣ ಕುರಿತ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಕಲ್ಕತ್ತ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.