ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್‌ನಲ್ಲಿ ರಾಹುಲ್ ಗಾಂಧಿ ಯುರೋಪ್ ಪ್ರವಾಸ

Published 29 ಆಗಸ್ಟ್ 2023, 2:01 IST
Last Updated 29 ಆಗಸ್ಟ್ 2023, 2:01 IST
ಅಕ್ಷರ ಗಾತ್ರ

ನವದೆಹಲಿ: ಸೆಪ್ಟೆಂಬರ್‌ನಲ್ಲಿ ಐದು ದಿನಗಳ ಕಾಲ ಯುರೋಪ್‌ ಪ್ರವಾಸ ಕೈಗೊಳ್ಳಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ಯಾರಿಸ್‌ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 9 ಮತ್ತು 10ರಂದು ದೆಹಲಿಯಲ್ಲಿ ಜಿ20 ಸಭೆ ನಡೆಯಲಿದ್ದು, ಈ ವೇಳೆಗಾಗಲೇ ರಾಹುಲ್‌ ಗಾಂಧಿ ಯುರೋಪ್‌ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 7 ರಂದು ಬ್ರಸೆಲ್ಸ್‌ನಲ್ಲಿ ಯುರೋಪಿಯನ್ ಯೂನಿಯನ್ ಸದಸ್ಯರ ಸಭೆಯಲ್ಲಿ ಭಾಗವಹಿಸಲಿರುವ ರಾಹುಲ್‌, ಸೆಪ್ಟೆಂಬರ್ 8ರಂದು ಪ್ಯಾರಿಸ್‌ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ. ಸೆಪ್ಟೆಂಬರ್ 9ರಂದು ಫ್ರಾನ್ಸ್‌ನ ಕಾರ್ಮಿಕ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 10ರಂದು ನಾರ್ವೆಗೆ ಭೇಟಿ ನೀಡಲಿರುವ ಅವರು ಅಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರವಾಸ ಸಂದರ್ಭ ಅನಿವಾಸಿ ಭಾರತೀಯರನ್ನು ಭೇಟಿ ಮಾಡಲಿರುವ ರಾಹುಲ್‌ ಅವರೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT