ರಾಯಚೂರು: ‘ಭಾರತ ಇಂದು ಆರ್ಥಿಕ ಮತ್ತು ಸಾಂಸ್ಕೃತಿಕ ಬಿಕ್ಕಟ್ಟಿನಲ್ಲಿದೆ’ ಎಂದು ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಎಐಡಿಎಸ್ಒ, ಎಐಡಿವೈಒ, ಎಐಎಂಎಸ್ಎಸ್ ಸಂಘಟನೆ ವತಿಯಿಂದ ನಗರದ ಭಗತ್ ಸಿಂಗ್ ವೃತ್ತದಲ್ಲಿ ಸೋಮವಾರ ನಡೆದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಶಿಕ್ಷಣ ಸಂಪೂರ್ಣ ಖಾಸಗೀಕರಣಗೊಳ್ಳುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಸರ್ಕಾರ ಮುಚ್ಚಲು ಹೊರಟಿದೆ. ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಲಕ್ಷಾಂತರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎಲ್ಲ ಸಮಸ್ಯೆಗಳ ವಿರುದ್ಧ ದೇಶದ ವಿದ್ಯಾರ್ಥಿ ಯುವಜನ, ಮಹಿಳೆಯರು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. ಭಗತ್ ಸಿಂಗ್ ಕಂಡ ಶೋಷಣೆ ರಹಿತ ಸಮ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ’ ಎಂದರು.

‘ಭಗತ್ ಸಿಂಗ್ ಅವರು ಯಾವತ್ತೂ ಜೀವನದಲ್ಲಿ ರಾಜಿ ಮಾಡಿಕೊಳ್ಳಲಿಲ್ಲ. ನಂಬಿದ ತತ್ವಕ್ಕಾಗಿ ಜೀವವನ್ನೇ ಕೊಟ್ಟರು. ಬ್ರಿಟಿಷರ ವಿರುದ್ಧ ರಾಜಿ ಮಾಡಿಕೊಳ್ಳದೆ ನಗು ನಗುತ್ತ ಗಲ್ಲಿಗೇರಿದರು. ಬ್ರಿಟಿಷರನ್ನು ಭಾರತದಿಂದ ಓಡಿಸುವುದು ಮಾತ್ರ ಅವರ ಗುರಿಯಾಗಿರಲಿಲ್ಲ. ಭಾರತದಲ್ಲಿ ಸಮಾಜವಾದಿ ಕ್ರಾಂತಿ ಮಾಡಬೇಕು ಎಂದು ಪಣತೊಟ್ಟಿದ್ದರು’ ಎಂದು ಹೇಳಿದರು.

ಕೃಷಿ ವಿವಿ ಸಂಶೋಧನಾ ವಿದ್ಯಾರ್ಥಿ ಹಾಗೂ ಎಐಡಿವೈಒ ಸದಸ್ಯ ಶಿವಪ್ಪ ಅಸ್ಕಿಹಾಳ್ ಮಾತನಾಡಿ, ‘ಭಗತ್ ಸಿಂಗ್ ಅವರು ಪುಸ್ತಕ ಪ್ರೇಮಿಯಾಗಿದ್ದರು. ಅತಿ ಕಡಿಮೆ ವಯಸ್ಸಿನಲ್ಲಿ ಬಹಳಷ್ಟು ಪುಸ್ತಕಗಳನ್ನು ಓದಿದ್ದರು. ಭಾರತದಲ್ಲಿ ಕ್ರಾಂತಿಯಾಗಬೇಕೆಂದರೆ ಗನ್ನಿನ ಜೊತೆ ಪೆನ್ನಿನ ಅವಶ್ಯಕತೆ ಇದೆ ಎಂದು ಅರಿತಿದ್ದರು. ಭಗತ್ ಸಿಂಗ್ ಮೇಲೆ ಜಲಿಯನ್ ವಾಲಾಬಾಗ್ ಘಟನೆ ಗಾಢವಾದ ಪರಿಣಾಮ ಬೀರಿತ್ತು. ಹಾಗಾಗಿ ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಡುವ ಸಂಕಲ್ಪ ತೊಟ್ಟಿದ್ದರು’ ಎಂದು ತಿಳಿಸಿದರು.

‘ಭಗತ್ ಸಿಂಗ್ ಅವರ ನೇತೃತ್ವದ ಕ್ರಾಂತಿಕಾರಿಗಳ ಗುಂಪು ಜಾತಿ ಪದ್ಧತಿ, ಕೋಮುವಾದದಂಥ ಸಾಮಾಜಿಕ ಪಿಡುಗುಗಳ ವಿರುದ್ಧ ರಾಜಿರಹಿತವಾಗಿ ಹೋರಾಟ ನಡೆಸಿದರು’ ಎಂದರು.

ಸಾಹಿತಿ ಬಶೀರ್ ಅಹ್ಮದ್ ಹೊಸಮನಿ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಮಹೇಶ ಚೀಕಲಪರವಿ, ಎಐಎಂಎಸ್ಎಸ್ ಜಿಲ್ಲಾ ಸಂಘಟನಾಕಾರರಾದ ಸರೋಜಾ ಗೊನವಾರ ಅವರು ಕ್ರಾಂತಿಕಾರಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ವಿನೋದ ಕುಮಾರ, ಮಹೇಶ ಚೀಕಲಪರ್ವಿ, ನಂದ ಗೋಪಾಲ್, ಅಂಬಿಕಾ, ಮೌನೇಶ್, ಶಿವಕುಮಾರ, ಬಸವರಾಜ ದೇಸಾಯಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-32-595185931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.