ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂನತೆಗಳನ್ನು ಪತ್ತೆ ಹಚ್ಚಿ, ಸರಿಪಡಿಸುವಂತೆ ಅಧಿಕಾರಿಗಳಿಗೆ ರೈಲ್ವೆ ಮಂಡಳಿ ಸೂಚನೆ

Published 11 ಜೂನ್ 2023, 15:58 IST
Last Updated 11 ಜೂನ್ 2023, 15:58 IST
ಅಕ್ಷರ ಗಾತ್ರ

ನವದೆಹಲಿ: ವಲಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ವಾಸ್ತವ ಸಂಗತಿಗಳನ್ನು ಅರಿಯುವ ಜೊತೆಗೆ ರೈಲ್ವೆ ವ್ಯವಸ್ಥೆಯಲ್ಲಿ ಕಂಡುಬರುವ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ರೈಲ್ವೆ ಮಂಡಳಿ ಸೂಚಿಸಿದೆ.

ಮಂಡಳಿಯ ಅಧ್ಯಕ್ಷ ಅರುಣಕುಮಾರ್ ಲಾಹೋಟಿ ಅವರು ಇತ್ತೀಚೆಗೆ ನಡೆಸಿದ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರು ಹಾಗೂ ವಿಭಾಗೀಯ ವ್ಯವಸ್ಥಾಪಕರ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

‘ರೈಲುಗಳ ಸುರಕ್ಷತೆಗೆ ಸಂಬಂಧಿಸಿ ನಿತ್ಯವೂ ಕಣ್ಗಾವಲಿರಿಸಬೇಕು. ರೈಲ್ವೆಯಿಂದ ವೇತನ ಪಡೆಯುವ ಪ್ರತಿಯೊಬ್ಬರ ಮೇಲೂ ಸುರಕ್ಷತೆ ಖಾತರಿಪಡಿಸುವ ಜವಾಬ್ಧಾರಿ ಇದೆ. ಈ ವಿಷಯದಲ್ಲಿ ನಿರ್ವಹಣೆಯೂ ಮಹತ್ವದ ಪಾತ್ರ ವಹಿಸುತ್ತದೆ. ಮುಂಗಾರು ಆರಂಭಗೊಳ್ಳುತ್ತಿರುವ ಕಾರಣ ಸುರಕ್ಷತೆ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT