ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಭಾರತದ ಹಲವೆಡೆ ರೈಲು ಸಂಚಾರ ವ್ಯತ್ಯಯ: ಅಧಿಕಾರಿಗಳೊಂದಿಗೆ ಸಚಿವ ವೈಷ್ಣವ್ ಸಭೆ

Published 11 ಜುಲೈ 2023, 23:20 IST
Last Updated 11 ಜುಲೈ 2023, 23:20 IST
ಅಕ್ಷರ ಗಾತ್ರ

ನವದೆಹಲಿ: ಭಾರಿ ಮಳೆಯಿಂದಾಗಿ ಉತ್ತರ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ರೈಲುಗಳ ಸಂಚಾರ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿವೈಷ್ಣವ್‌ ಮಂಗಳವಾರ ಸಭೆ ನಡೆಸಿ ಪರ್ಯಾಲೋಚಿಸಿದರು.

ಈ ಸಂಬಂಧ ‘ರೇಲ್‌ ಭವನ’ದಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ ಸಚಿವ ವೈಷ್ಣವ್, ಪರಿಸ್ಥಿತಿ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

‘ಸಚಿವರು ವಿವಿಧ ರೈಲ್ವೆ ವಲಯಗಳ ಉನ್ನತ ಅಧಿಕಾರಿಗಳೊಂದಿಗೆ ವರ್ಚುವಲ್‌ಆಗಿ ಸಭೆ ನಡೆಸಿ, ಮಾಹಿತಿ ಪಡೆದರು’ ಎಂದು ರೈಲ್ವೆ ವಕ್ತಾರ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡಕ್ಕೆ ಸಂಪರ್ಕಿಸುವ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT