ನವದೆಹಲಿ: ರೈಲು ನಿಯಂತ್ರಕರ ಶೇಕಡ 60ರಷ್ಟು ಹುದ್ದೆಗಳನ್ನು ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ)ಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರೈಲ್ವೆ ಸಚಿವಾಲಯವು ನಿರ್ಧರಿಸಿದೆ.

ಜೂನ್ 25ರಂದು ಈ ಬದಲಾವಣೆ ತರುವ ನಿರ್ಧಾರವನ್ನು ಇಲಾಖೆ ಪ್ರಕಟಿಸಿದೆ. ಖಾಲಿಯಿರುವ ಹುದ್ದೆಗಳ ಪೈಕಿ ಶೇ 60ರಷ್ಟು ನಿಯಂತ್ರಕರ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆರ್ಆರ್ಬಿಯ ಮೂಲಕ ನೇಮಕಾತಿ ಮಾಡಲಾಗುತ್ತದೆ.

‘ಪರೀಕ್ಷೆ ಯಾವ ರೀತಿ ನಡೆಸಬೇಕು ಎಂಬುದು ಸೇರಿದಂತೆ ಇನ್ನೂ ಕೆಲವು ವಿಚಾರಗಳ ಕುರಿತಂತೆ ಇನ್ನಷ್ಟೇ ನಿರ್ಧಾರವಾಗಬೇಕಿದೆ’ ಎಂದು ರೈಲ್ವೆ ಮಂಡಳಿಯ ಮಾಹಿತಿ ಹಾಗೂ ಪ್ರಚಾರ ವಿಭಾಗದ ಕಾರ್ಯಕಾರಿ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.

‘2017ರವರೆಗೂ ಇದೇ ಮಾದರಿಯಲ್ಲಿ ಪರೀಕ್ಷೆ ನಡೆಸಿ, ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿತ್ತು. ನಂತರ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಖಾಲಿ ಉಳಿದಿದ್ದ ಹುದ್ದೆಗಳಿಗೆ ರೈಲ್ವೆ ಗಾರ್ಡ್, ಕ್ಲರ್ಕ್, ಸ್ಟೇಷನ್ ಮಾಸ್ಟರ್ಗಳನ್ನೇ ಭರ್ತಿ ಮಾಡಲಾಗಿತ್ತು’ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ನಿಯಂತ್ರಣ ವಿಭಾಗದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಆರ್ಥಿಕ ಸೌಲಭ್ಯಗಳು ಸಿಗುತ್ತಿರಲಿಲ್ಲ. ಈ ಕಾರಣದಿಂದ, ಪ್ರತಿಭಾವಂತ ಅಭ್ಯರ್ಥಿಗಳು ಇಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದರು. ಇಲಾಖೆಯ ಪ್ರಮುಖ ವಿಭಾಗವಾಗಿದ್ದ ಇದರಲ್ಲಿ ಪ್ರತಿಭಾವಂತರ ಕೊರತೆ ಕಾಡುತ್ತಿತ್ತು. ಈ ಕೊರತೆ ಕೊನೆಗಾಣಿಸಿ, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರೈಲ್ವೆ ಕಾರ್ಯಾಚರಣಾ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ರೈಲ್ವೆ ನಿಯಂತ್ರಣ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.