ನವದೆಹಲಿ: ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಪ್ರಶ್ನೆಗೆ ಉತ್ತರಿಸಿದ ಅವರು, ‘ಅರ್ಜಿ ಸಲ್ಲಿಸುವ ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹದಿನೈದು ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬೇಕು. ಪ್ರಶ್ನೆಗಳನ್ನು ಅಭ್ಯರ್ಥಿ ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್ನಲ್ಲಿ ನೀಡಲಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.