ನವದೆಹಲಿ: ‘ದೆಹಲಿಯ ರೈಲು ನಿಲ್ದಾಣದಲ್ಲಿ ಫೆ. 15ರಂದು ಸಂಭವಿಸಿದ ಕಾಲ್ತುಳಿತ ಘಟನೆಯ ಸಂದರ್ಭದಲ್ಲಿ ಹಮಾಲ ವೃತ್ತಿ ನಡೆಸುವವರು ಸ್ವಯಂ ಪ್ರೇರಣೆಯಿಂದ ಕಾರ್ಯಪ್ರವೃತ್ತರಾಗಿ ಹಲವರ ಜೀವ ಉಳಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

‘ಸಾಮಾನ್ಯವಾಗಿ ಮಾನವೀಯತೆಯ ಬೆಳಕು ಕತ್ತಲೆಯ ಸಮಯದಲ್ಲೇ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ. ಇದಕ್ಕೆ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಹಮಾಲ ವೃತ್ತಿಯ ಮೂಲಕ ಬದುಕು ಕಟ್ಟಿಕೊಂಡಿರುವ ಸೋದರರೇ ಸ್ಪಷ್ಟ ಉದಾಹರಣೆ. ಇಡೀ ದೇಶದ ಪರವಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದು ಹೇಳಿದ್ದಾರೆ.

‘ಈ ದುರ್ಘಟನೆಯಿಂದ ಕೇಂದ್ರ ಸರ್ಕಾರ ಪಾಠ ಕಲಿಯಬೇಕಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದು ಮತ್ತು ಯೋಜನಾಬದ್ಧ ಮುನ್ನೆಚ್ಚರಿಕಾ ಕ್ರಮ ಅಳವಡಿಸುವುದು ಸೂಕ್ತ. ಆ ಮೂಲಕ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ’ ಎಂದು ರಾಹುಲ್ ಆಗ್ರಹಿಸಿದ್ದಾರೆ.

‘ಇಂದು ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಇಂಥ ದುರ್ಘಟನೆಗಳನ್ನು ತಡೆಯಲು, ಹೆಚ್ಚು ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನವನ್ನು ರೈಲ್ವೆ ಇಲಾಖೆ ನಡೆಸಬೇಕು. ಮೂಲಸೌಕರ್ಯವನ್ನು ಇನ್ನಷ್ಟು ಉತ್ತಮಪಡಿಸಬೇಕು. ತುರ್ತು ಸಂದರ್ಭದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆ ಇದೆ’ ಎಂದಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ರಾಜ್ ಬಳಿ ಆಯೋಜನೆಗೊಂಡಿದ್ದ ಮಹಾಕುಂಭ ಮೇಳಕ್ಕೆ ತೆರಳಲು ದೆಹಲಿ ರೈಲು ನಿಲ್ದಾಣದಲ್ಲಿ ಫೆ. 15ರಂದು ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 18 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.