ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣ:ಬಿಹಾರದ ಮಾಜಿ CM ರಾಬ್ಡಿ ದೇವಿ, ಮಕ್ಕಳಿಗೆ ಜಾಮೀನು

Published 9 ಫೆಬ್ರುವರಿ 2024, 13:02 IST
Last Updated 9 ಫೆಬ್ರುವರಿ 2024, 13:02 IST
ಅಕ್ಷರ ಗಾತ್ರ

ನವದೆಹಲಿ: ‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಅವರ ಮಕ್ಕಳಾದ ಮೀಸಾ ಭಾರತಿ, ಹೇಮಾ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವು ಇದೇ 28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇವರ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕೋರಿದ್ದರಿಂದ, ವಿಶೇಷ ನ್ಯಾಯಾಧೀಶ ವಿಶಾಲ್‌ ಗೋಗ್ನೆ ಅವರು ಮೂವರಿಗೆ ಶುಕ್ರವಾರ ಮಧ್ಯಂತರ ಜಾಮೀನು ನೀಡಿದರು. ನ್ಯಾಯಾಲಯದ ಸಮನ್ಸ್‌ಗೆ ಅನುಗುಣವಾಗಿ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದರು.

2004ರಿಂದ 2009ರ ಅವಧಿಯಲ್ಲಿ ಲಾಲು ಪ್ರಸಾದ್‌ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದರು. ಈ ವೇಳೆ ಲಾಲು ಕುಟುಂಬಕ್ಕೆ ಜಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಗರಣಕ್ಕೆ ಸಂಬಂಧಿಸಿ ಲಾಲು ಪ್ರಸಾದ್‌, ರಾಬ್ಡಿ ದೇವಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT