ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ: ರೈಲ್ವೆಯಿಂದ ಅಗ್ನಿವೀರರಿಗೆ ಶೇ 15ರಷ್ಟು ಮೀಸಲಾತಿ

ವಯೋಮಾನದಲ್ಲಿ ಸಡಿಲಿಕೆ, ದೈಹಿಕ ಪರೀಕ್ಷೆಯಿಂದ ವಿನಾಯಿತಿ
Published 11 ಮೇ 2023, 19:31 IST
Last Updated 11 ಮೇ 2023, 19:31 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಇಲಾಖೆಗಳಲ್ಲಿನ ನಾನ್‌ ಗೆಜೆಟೆಡ್‌ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ 15ರಷ್ಟು ಒಟ್ಟು ಮೀಸಲಾತಿ, ವಯೋಮಿತಿಯಲ್ಲಿ ಸಡಿಲಿಕೆ ಹಾಗೂ ದೈಹಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಿದೆ ಎಂದು ಮೂಲಗಳು ಗುರುವಾರ ಹೇಳಿವೆ.

ಅಗ್ನಿವೀರರಿಗೆ ಈ ಸೌಲಭ್ಯಗಳನ್ನು ನೀಡುವುದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಮಂಡಳಿ ಪತ್ರ ಬರೆದಿದೆ.

ಅಗ್ನಿವೀರರಿಗಾಗಿ ರೈಲ್ವೆ ಭದ್ರತಾ ಪಡೆಯಲ್ಲಿ (ಆರ್‌ಪಿಎಫ್‌) ಕೂಡ ಮೀಸಲಾತಿ ನೀತಿಯನ್ನು ಜಾರಿಗೆ ತರಲಾಗುತ್ತದೆ ಎಂದು ಇವೇ ಮೂಲಗಳು ಹೇಳಿವೆ.

ಮೊದಲ ಬ್ಯಾಚ್‌ನ ಅಗ್ನಿವೀರರಿಗೆ ವಯೋಮಿತಿಯಲ್ಲಿ ಐದು ವರ್ಷ ಹಾಗೂ ನಂತರದ ಬ್ಯಾಚ್‌ಗಳ ಅಗ್ನಿವೀರರಿಗೆ ಮೂರು ವರ್ಷಗಳಷ್ಟು ಸಡಿಲಿಕೆ ನೀಡಲಾಗುವುದು. ರೈಲ್ವೆಯ ವಿವಿಧ ವಿಭಾಗಗಳಲ್ಲಿನ ಹಂತ–1 ಹಾಗೂ ಹಂತ–2 ಹಾಗೂ ಅದಕ್ಕೂ ಮೇಲ್ಪಟ್ಟ ಹುದ್ದೆಗಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT