ನವದೆಹಲಿ: ಭಾರತೀಯ ರೈಲ್ವೆ ಮಂಡಳಿಯು ತನ್ನ ನಿಲ್ದಾಣಗಳ ಆವರಣದಲ್ಲಿ ಸಿನಿಮಾ ಚಿತ್ರೀಕರಣಕ್ಕಾಗಿ ಅನುಮತಿ ನೀಡಲು ಏಕಗವಾಕ್ಷಿ ಆನ್ಲೈನ್ ವ್ಯವಸ್ಥೆಯನ್ನು ರೂಪಿಸಿದೆ.

ಇದಕ್ಕಾಗಿ ರೈಲ್ವೆ ಮಂಡಳಿಯು ಫಿಲ್ಮ್ ಫೆಸಿಲಿಟೇಷನ್ ಕಚೇರಿ (ಎಫ್ಎಫ್ಒ) ಅನ್ನು ಸ್ಥಾಪಿಸಿದ್ದು, ಇದಕ್ಕಾಗಿ www.ffo.gov.in ಎನ್ನುವ ಪ್ರತ್ಯೇಕ ವೆಬ್ ಪೋರ್ಟಲ್ ಅನ್ನೂ ರೂಪಿಸಿದೆ.

‘ಚಲನಚಿತ್ರ ನಿರ್ಮಾಪಕರು ಒಂದಕ್ಕಿಂತ ಹೆಚ್ಚು ವಲಯ ರೈಲ್ವೆ ವ್ಯಾಪ್ತಿಯಲ್ಲಿ ಬರುವ ವಿವಿಧ ರೈಲ್ವೆ ಸ್ಥಳಗಳಲ್ಲಿ ಚಿತ್ರೀಕರಣಕ್ಕಾಗಿ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ನಂತರ, ವಲಯ ರೈಲ್ವೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಮತ್ತು ಅವರು ಅರ್ಜಿಗಳನ್ನು ಪರಿಶೀಲಿಸುತ್ತಾರೆ. ನಂತರ ಅನುಮತಿ ನೀಡಲಾಗುವುದು’ ಎಂದು ರೈಲ್ವೆ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ ಸಿನಿಮಾಗಳ ಚಿತ್ರೀಕರಣಕ್ಕಾಗಿ ಚಲನಚಿತ್ರ ನಿರ್ಮಾಪಕರು 17 ವಲಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮತ್ತು ರೈಲ್ವೆ ಮಂಡಳಿಗೆ ಅರ್ಜಿಗಳನ್ನು ಸಲ್ಲಿಸಿ ಅನುಮತಿ ಪಡೆಯಬೇಕಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.