ನವದೆಹಲಿ: ರೈಲು ಪ್ರಯಾಣಿಕರು ಇನ್ನು ಮುಂದೆ ರೈಲು ಹೊರಡಲು ಕೇವಲ ಐದು ನಿಮಿಷ ಇರುವಾಗಲೂ ಟಿಕೆಟ್ ಕಾಯ್ದಿರಿಸಬಹುದಾಗಿದೆ. ರೈಲ್ವೆ ಇಲಾಖೆಯು ಹಳೆಯ ಪದ್ಧತಿಯನ್ನೇ ಮುಂದುವರಿಸಲು ತೀರ್ಮಾನಿಸಿದ್ದು, ಇದು ಅಕ್ಟೋಬರ್ 10ರಿಂದಲೇ ಜಾರಿಯಾಗಲಿದೆ.

‘ಈ ಹಿಂದೆ ಇದ್ದಂತೆಯೇ ರೈಲು ಹೊರಡಲು 30ರಿಂದ 5 ನಿಮಿಷ ಮುಂಚಿತವಾಗಿ ಪ್ರಯಾಣಿಕರ ಎರಡನೇ ಮೀಸಲು ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ’ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಕೋವಿಡ್–19 ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭಿಸಿದಾಗ ರೈಲು ಹೊರಡಲು ಎರಡು ಗಂಟೆ ಇದ್ದಂತೆ ಪ್ರಯಾಣಿಕರ ಎರಡನೇ ಮೀಸಲು ಪಟ್ಟಿ ಬಿಡುಗಡೆ ಮಾಡಲಾಗುತ್ತಿತ್ತು.

‘ರೈಲು ಹೊರಡಲು ಕನಿಷ್ಠ ನಾಲ್ಕು ಗಂಟೆ ಮುಂಚಿತವಾಗಿ ಮೊದಲ ಪಟ್ಟಿ ತಯಾರಿಸಲಾಗುತ್ತದೆ. ಟಿಕೆಟ್ ರದ್ದತಿಯಿಂದಾಗಿ ಆಸನಗಳು ಖಾಲಿ ಇದ್ದರೆ ಎರಡನೇ ಪಟ್ಟಿ ಸಿದ್ಧಪಡಿಸುವವರೆಗೂ ಬುಕಿಂಗ್ ಕೌಂಟರ್ಗಳಲ್ಲಿ ಅಥವಾ ಆನ್ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಿಂದ ನವೆಂಬರ್ 30ರವರೆಗೆ ದೇಶದ ವಿವಿಧ ಭಾಗಗಳಿಗೆ ಸುಮಾರು 200 ರೈಲುಗಳ ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಉದ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.