ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಬರುವ ಹಬ್ಬಗಳ ಪ್ರಯುಕ್ತ 6 ಸಾವಿರ ವಿಶೇಷ ರೈಲುಗಳ ಸಂಚಾರ!

12,500 ಹೆಚ್ಚುವರಿ ಜನರಲ್‌ ಬೋಗಿಗಳು
Published : 27 ಸೆಪ್ಟೆಂಬರ್ 2024, 12:37 IST
Last Updated : 27 ಸೆಪ್ಟೆಂಬರ್ 2024, 12:37 IST
ಫಾಲೋ ಮಾಡಿ
Comments

ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗುವ ಸಾಧ್ಯತೆ ಇರುವ ಕಾರಣ ದೇಶದಾದ್ಯಂತ ಒಟ್ಟು 6,000 ವಿಶೇಷ ರೈಲುಗಳ ಸಂಚಾರಕ್ಕೆ ಭಾರತೀಯ ರೈಲ್ವೆ ವ್ಯವಸ್ಥೆ ಮಾಡಿದ್ದು ಇದರಿಂದ ಸುಮಾರು 1 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ‘ದುರ್ಗಾ ಪೂಜೆ, ದೀಪಾವಳಿ ಹಾಗೂ ಛತ್‌ ಹಬ್ಬಗಳ ಸಂದರ್ಭದಲ್ಲಿ ದೇಶದ ಅನೇಕ ಕಡೆಗಳಿಂದ ತಮ್ಮ ಊರುಗಳಿಗೆ ತೆರಳುವ ಜನರಿಗೆ ಅನುಕೂಲ ಕಲ್ಪಿಸಲು ಹಾಗೂ ದಟ್ಟಣೆ ಕಡಿಮೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು. 

‘ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 108 ರೈಲುಗಳಿಗೆ ಹೆಚ್ಚುವರಿಯಾಗಿ ಸುಮಾರು 12,500 ಬೋಗಿಗಳ ವ್ಯವಸ್ಥೆ ಮಾಡಲಾಗಿದೆ. ದೀಪಾವಳಿ, ದುರ್ಗಾ ಪೂಜೆ ಹಾಗೂ ಛತ್‌ ಹಬ್ಬಗಳ ಸಂದರ್ಭದಲ್ಲಿ ವಿಶೇಷವಾಗಿ ಬಿಹಾರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಮಾರ್ಗದ ರೈಲುಗಳಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುತ್ತದೆ. ಕಳೆದ ವರ್ಷ ಈ ಸಂದರ್ಭದಲ್ಲಿ ಸುಮಾರು 4,429 ವಿಶೇಷ ರೈಲುಗಳು ಸಂಚರಿಸಿದ್ದವು. ಈ ವರ್ಷ ಒಟ್ಟು 5,975 ರೈಲುಗಳು ಸಂಚರಿಸಲಿವೆ’ ಎಂದರು. 

ಅಕ್ಟೋಬರ್‌ 9ರಿಂದ ದುರ್ಗಾ ಪೂಜೆ ಆರಂಭವಾಗಲಿದೆ. ಅದೇ ತಿಂಗಳ 31ರಂದು ದೀಪಾವಳಿ ಹಬ್ಬ ಹಾಗೂ ನವೆಂಬರ್‌ 7 ಮತ್ತು 8 ರಂದು ಛತ್‌ ಉತ್ಸವವನ್ನು ಆಚರಿಸಲಾಗುತ್ತದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT