ನವದೆಹಲಿ:ಕೊರೊನಾ ಸೋಂಕು ಪ್ರಕರಣ ಏರುತ್ತಲೇ ಇರುವುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಪ್ಯಾಸೆಂಜರ್ ರೈಲುಗಳ ಸೇವೆ ಒದಗಿಸಲು ಸ್ವಲ್ಪ ಸಮಯ ಬೇಕಾಗುತ್ತದೆ’ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ರೈಲ್ವೆ ಅಧಿಕಾರಿಗಳು ರಾಜ್ಯ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದು, ‘ರಾಜ್ಯಗಳು ಹೆಚ್ಚಿನ ಸಂಖ್ಯೆಯಲ್ಲಿ ರೈಲು ಸೇವೆ ಒದಗಿಸುವಂತೆ ಕೇಳಿಕೊಂಡರೆ, ನಾವು ಅದನ್ನು ಕಾರ್ಯಗತಗೊಳಿಸಲು ಸಿದ್ಧರಿದ್ದೇವೆ’ ಎಂದುರೈಲ್ವೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ಶನಿವಾರ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಸ್ತುತ 230 ವಿಶೇಷ ಪ್ರಯಾಣಿಕ ರೈಲುಗಳು ಕಾರ್ಯನಿರ್ವಹಿಸುತ್ತಿವೆ. ಬಹುತೇಕ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆ ಇದ್ದು, ಬೋಗಿಗಳು ಖಾಲಿ ಇವೆ. ಜನರ ಅಗತ್ಯಗಳಿಗೆ ತಕ್ಕಷ್ಟೇ ರೈಲುಗಳು ಸಂಚರಿಸುತ್ತಿವೆ.ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ.ಸರಕು ಸಾಗಣೆ ಪ್ರಮಾಣ ದುಪ್ಪಟ್ಟುಗೊಳಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದರು.

‘ಮೇ 1 ರಿಂದ ಇಲ್ಲಿಯವರೆಗೆ 4,615 ಶ್ರಮಿಕ್ ವಿಶೇಷ ರೈಲುಗಳು ವಲಸೆ ಕಾರ್ಮಿಕರು ಮತ್ತು ಇತರೆ ರಾಜ್ಯಗಳಲ್ಲಿ ಸಿಲುಕಿದವರನ್ನು ಅವರವರ ಊರುಗಳಿಗೆ ತಲುಪಿಸುವ ಕಾರ್ಯ ಮಾಡಿದೆ. ಅಗತ್ಯವಿದ್ದರೆ, ಹೆಚ್ಚಿನ ಶ್ರಮಿಕ್ ವಿಶೇಷ ರೈಲುಗಳುಕಾರ್ಯನಿರ್ವಹಿಸಲು ಸಿದ್ಧವಾಗಿವೆ’ ಎಂದು ಅವರು ಹೇಳಿದರು.

ವಿವಿಧ ರಾಜ್ಯ ಸರ್ಕಾರಗಳ ಮನವಿಯ ಮೇರೆಗೆ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 813 ರೈಲ್ವೆ ಬೋಗಿಗಳಲ್ಲಿ 12,712 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.