ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ಬಿಸಿಲ ಧಗೆ ತಗ್ಗಿಸಿದ ಮಳೆ

Published 12 ಮೇ 2024, 13:08 IST
Last Updated 12 ಮೇ 2024, 13:08 IST
ಅಕ್ಷರ ಗಾತ್ರ

ಜೈಪುರ: ಮೆಡಿಟರೇನಿಯನ್ ಸಮುದ್ರದಲ್ಲಿನ ಒತ್ತಡದ ಏರಿಳಿತದಿಂದಾಗಿ ರಾಜಸ್ಥಾನದ ಹಲವು ಭಾಗಗಳಲ್ಲಿ 24 ಗಂಟೆಯಿಂದ ಸಾಧಾರಣ ಮಳೆಯಾಗಿದೆ ಎಂದು ಜೈಪುರದಲ್ಲಿರುವ ಹವಾಮಾನ ಇಲಾಖೆಯ ಕೇಂದ್ರ ಭಾನುವಾರ ತಿಳಿಸಿದೆ. 

ರಾಜಸಮಂದ್ ಜಿಲ್ಲೆಯ ದೇವಗಢ ಪಟ್ಟಣದಲ್ಲಿ ಅತಿ ಹೆಚ್ಚು 42 ಮಿಲಿ ಮೀಟರ್‌ನಷ್ಟು ಮಳೆಯಾಗಿದೆ. ಈ ಮಳೆಯಿಂದ ಹಲವು ದಿನಗಳಿಂದ ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಜನರು ಕೊಂಚ ನಿರಾಳರಾಗಿದ್ದಾರೆ. ಮೇ 14ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮಳೆಯಿಂದಾಗಿ ರಾಜ್ಯದಲ್ಲಿನ ಗರಿಷ್ಠ ತಾಪಮಾನವು 42 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಶನಿವಾರ ಮಧ್ಯಾಹ್ನದಿಂದ ಬಿಕಾನೇರ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದೂಳಿನ ಬಿರುಗಾಳಿ ವ್ಯಾಪಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT