ತಿರುವನಂತಪುರ: ಕೇರಳದ ಉತ್ತರ ಭಾಗದ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹಲವು ಕಡೆಗಳಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ, ಆಶ್ರಯ ಕೇಂದ್ರಗಳಿಗೆ ಕರೆದೊಯ್ಯಲಾಗಿದೆ.

ರಾಜ್ಯದ ಎಲ್ಲೆಡೆ ಮರಗಳು ಉರುಳಿಬಿದ್ದಿರುವ ವರದಿಗಳು ಇವೆ. ಇದರಿಂದಾಗಿ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ ಹಾಗೂ ಎತ್ತರದ ಸ್ಥಳಗಳಲ್ಲಿ ಜನಜೀವನಕ್ಕೆ ತೊಂದರೆ ಆಗಿದೆ. ರಾಜ್ಯದಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ.

ವಯನಾಡ್ನ ಸುಲ್ತಾನ್ ಬತ್ತೇರಿಯ ಪುಳಂಕುನಿಯಲ್ಲಿನ ಬುಡಕಟ್ಟು ಸಮುದಾಯದ ಕೆಲವು ಕುಟುಂಬಗಳನ್ನು ಆಶ್ರಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಎನ್ಡಿಆರ್ಎಫ್ ತಂಡವು ಬೀಡುಬಿಟ್ಟಿದೆ.

ಪಾಲಕ್ಕಾಡ್ ಜಿಲ್ಲೆಯಲ್ಲಿ ತೀವ್ರ ಗಾಳಿ ಹಾಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯು ಜನಜೀವನಕ್ಕೆ ಅಡಚಣೆ ಸೃಷ್ಟಿಸಿದೆ. ಅಟ್ಟಪ್ಪಾಡಿ, ನೆಲ್ಲಿಯಂಪತಿಯಲ್ಲಿಯೂ ಸಮಸ್ಯೆ ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.