ಪಶ್ಚಿಮ ಭಾರತದ ರಾಜ್ಯಗಳು ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಹಿತಕರ ಘಟನೆಗಳನ್ನು ಎದುರಿಸಲು ರಾಜ್ಯ ವಿಕೋಪ ನಿರ್ವಹಣಾ ಪಡೆಗಳು ಸಜ್ಜಾಗಿವೆ. ಗುರುವಾರದ ನಂತರ ಮಧ್ಯ ಭಾರತ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಹವಾಮಾನ ಇಲಾಖೆ ಹೇಳಿದೆ

-ದೆಹಲಿ ಮತ್ತು ಚಂಡೀಗಡದಲ್ಲಿ ಸೋಮವಾರ ಭಾರಿ ಮಳೆಯಾಗುವ ಸಂಭವವಿದೆ

-ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಬುಧವಾರದವರೆಗೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ

-ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಉತ್ತರಾಖಂಡದಲ್ಲಿ ಬುಧವಾರದವರೆಗೂ ಗುಡುಗು-ಮಿಂಚು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ

-ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಬುಧವಾರದವರೆಗೂ ಭಾರಿ ಮಳೆಯಾಗಲಿದೆ

-ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಆಗುತ್ತಿರುವ ಭಾರಿ ಮಳೆ ಬುಧವಾರದವರೆಗೂ ಮುಂದುವರಿಯಲಿದೆ. ಗೋವಾದಲ್ಲೂ ಭಾರಿ ಮಳೆ ಇರಲಿದೆ

-ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಬುಧವಾರದವರೆಗೂ ಭಾರಿ ಮಳೆ ಸುರಿಯಲಿದೆ

ಮುಂಬೈ

ಮುಂಬೈನಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆವರೆಗೆ ಸುರಿದ ಮಳೆಯಿಂದಾಗಿ ನಗರದ ಹಲವೆಡೆ ಪ್ರವಾಹ ಸ್ಥಿತಿ ತಲೆದೋರಿದೆ. ಮತ್ತೆ ಭಾರಿ ಮಳೆಯಾಗುವ ಸಂಭವ ಇರುವುದರಿಂದ ನಗರವಾಸಿಗಳು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಸೂಚನೆ ನೀಡಿದೆ

-ನಗರದ ಹಲವೆಡೆ ರಸ್ತೆಗಳು ಜಲಾವೃತ, ಸಂಚಾರ ಅಸ್ತವ್ಯಸ್ಥ. ಬಸ್ ಸಂಚಾರ ಸ್ಥಗಿತ

-ಹಳಿಗಳು ಜಲಾವೃತವಾದ ಕಾರಣ ಮುಂಬೈ ಉಪನಗರ ರೈಲುಗಳ ಸಂಚಾರ ಸ್ಥಗಿತ

-ಬೊರಿವಿಲಿ ಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಕಾರುಗಳು

-180 ಮಿಲಿ ಮೀಟರ್ ಮುಂಬೈನಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆವರೆಗೆ ಸುರಿದ ಮಳೆಯ ಪ್ರಮಾಣ

-204.07 ಮಿಲಿಮೀಟರ್ ಪೂರ್ವ ಮುಂಬೈನಲ್ಲಿ ಸುರಿದ ಮಳೆಯ ಪ್ರಮಾಣ

-195.48 ಮಿಲಿಮೀಟರ್ ಪಶ್ಚಿಮ ಮುಂಬೈನಲ್ಲಿ ಸುರಿದ ಮಳೆಯ ಪ್ರಮಾಣ

ಮಧ್ಯಪ್ರದೇಶ

ರಾಜ್ಯದ ಹಲವೆಡೆ ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆವರೆಗೆ ಭಾರಿ ಮಳೆಯಾಗಿದೆ. ಆದರೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಂಭವವಿದೆ. ಹೀಗಾಗಿ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭೋಪಾಲ್, ಇಂದೋರ್, ಗ್ವಾಲಿಯರ್, ಜಬಲ್‌ಪುರ, ರೇವಾ, ದಾಮೋಹ್ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

142 ಮಿಲಿಮೀಟರ್ ಶಿವಪುರಿ ಜಿಲ್ಲೆಯಲ್ಲಿ ಭಾನುವಾರ ಸುರಿದ ಮಳೆಯ ಪ್ರಮಾಣ

ಗುಜರಾತ್

ದಕ್ಷಿಣ ಗುಜರಾತ್‌ನ ಹಲವು ಪ್ರದೇಶಗಳಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು, ಪ್ರವಾಹ ಸ್ಥಿತಿ ಉಂಟಾಹಿದೆ. ದಕ್ಷಿಣ ಗುಜರಾತ್‌ನ ವಲ್ಸಾದ್, ವಾಪಿ ಮತ್ತು ನವಸಾರಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದೆ. ಬುಧವಾರದವರೆಗೂ ಈ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಪ್ರವಾಹ ಸ್ಥಿತಿ ತಲೆದೋರಿದ್ದರೂ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

-226 ಮಿಲಿಮೀಟರ್ ವಾಪಿಯಲ್ಲಿ ಬಳಿಗ್ಗೆ 6ರಿಂದ ಸಂಜೆ 4ರವರೆಗೆ ಸುರಿದ ಮಳೆಯ ಪ್ರಮಾಣ

-232 ಮಿಲಿಮೀಟರ್ ಉಮರ್‌ಗಾಂನಲ್ಲಿ ಸುರಿದ ಮಳೆಯ ಪ್ರಮಾಣ

-143 ಮಿಲಿಮೀಟರ್ ವಲ್ಸಾದ್ ಪಟ್ಟಣದಲ್ಲಿ ಸುರಿದ ಮಳೆಯ ಪ್ರಮಾಣ

-120 ಮಿಲಿಮೀಟರ್ ನವಸಾರಿಯಲ್ಲಿ ಸುರಿದ ಮಳೆಯ ಪ್ರಮಾಣ

-118 ಮಿಲಿಮೀಟರ್ ಸೂರತ್ ಜಿಲ್ಲೆಯಲ್ಲಿ ಸುರಿದ ಮಳೆಯ ಪ್ರಮಾಣ

ಮುಂಬೈ: ಪರಿಹಾರ ಘೋಷಣೆ

ಮುಂಬೈ ಮಳೆ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪರಿಹಾರ ಘೋಷಿಸಿವೆ.

ಈ ಘಟನೆಗಳ ಬಗ್ಗೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಮೃತರ ಕುಟುಂಬದವರಿಗೆ₹ 2 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ₹ 50,000 ನೆರವು ಘೋಷಿಸಿದ್ದಾರೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ₹ 5 ಲಕ್ಷ ಪರಿಹಾರ ಘೋಷಿಸಿದೆ.

ಭೂಕುಸಿತದ ಮಾರಿ

ಭಾನುವಾರ ಸುರಿದ ಮಳೆಯಲ್ಲಿ ಭೂಕುಸಿದು 22 ಜನರು ಮೃತಪಟ್ಟಿದ್ದಾರೆ. 29 ವರ್ಷಗಳಲ್ಲಿ ಮುಂಬೈ ನಗರವೊಂದರಲ್ಲೇ ಮಳೆಯಿಂದ ಭೂಕುಸಿದು 290 ಜನರು ಮೃತಪಟ್ಟಿದ್ದಾರೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ನಗರದ ವಿವಿಧ ಪ್ರದೇಶಗಳಲ್ಲಿ ಭೂಕುಸಿತದ ಅಪಾಯವಿರುವ 257 ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ 22,483 ಜನರು ವಾಸಿಸುತ್ತಿದ್ದಾರೆ. ಈ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲು 2011ರಲ್ಲೇ ಶಿಫಾರಸು ಮಾಡಲಾಗಿತ್ತು. ಆದರೆ ಶಿಫಾರಸುಗಳು ಕಾರ್ಯರೂಪಕ್ಕೆ ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.