ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದ್ದು, ನಗರ ಮತ್ತು ಹೊರವಲಯದ ಕೆಲ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಮಳೆ ಸಂಬಂಧಿ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಚೆನ್ನೈನಲ್ಲಿ ವ್ಯಕ್ತಿಯೊಬ್ಬರು ಮಳೆಯಲ್ಲೇ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ನಗರದ ಪುಲಿಯಾಂತೋಪ್‌ನ ವಸತಿ ಕಟ್ಟಡ ಕುಸಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಉತ್ತರ ಚೆನ್ನೈನ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ.

ಚೆನ್ನೈನ ನಂಗಂಬಾಕಂ ಪ್ರದೇಶದಲ್ಲಿ ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಒಂದೇ ದಿನದಲ್ಲಿ 8 ಸೆಂ.ಮೀ. ಮಳೆಯಾಗಿದೆ. ಕಳೆದ 72 ವರ್ಷಗಳಲ್ಲಿ ಈ ರೀತಿಯಾಗಿ ಮೂರನೇ ಬಾರಿ ದಾಖಲೆಯ ಮಳೆಯಾಗಿದೆ ಎಂದು ಅಲ್ಲಿನ ಹವಾಮಾನ ಇಲಾಖೆಯ ಉಪ ನಿರ್ದೇಶಕ ಎಸ್. ಬಾಲಚಂದ್ರನ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಮುನ್ಸೂಚನೆ:ಮುಂದಿನ 24 ಗಂಟೆಗಳ ಅವಧಿಯಲ್ಲಿ, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ವೆಲ್ಲೂರ್ ಸೇರಿದಂತೆ ಉತ್ತರದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.