ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published 8 ಜನವರಿ 2024, 5:49 IST
Last Updated 8 ಜನವರಿ 2024, 5:49 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಉತ್ತರ ಭಾಗದಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಚೆನ್ನೈ ಮತ್ತು ನೆರೆಯ ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ನಾಗಪಟ್ಟಣಂ ಮತ್ತು ತಿರುವಾರೂರಿ‌ನಲ್ಲಿ ಭಾರಿ ಮಳೆಯಾಗಿದೆ.

ಚೆಂಗಲ್ಪಟ್ಟು, ರಾಣಿಪೇಟ, ವೆಲ್ಲೂರು ಮತ್ತು ಕಲ್ಲಕುರಿಚಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.

ನಾಗಪಟ್ಟಣಂ ಜಿಲ್ಲಾಡಳಿತವು ನಾಗಪಟ್ಟಣಂ ಮತ್ತು ಕೀಲ್ವೇಲೂರ್ ವೃತ್ತಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಜನವರಿ 7ರ ಬೆಳಗ್ಗೆ 8.30ರಿಂದ ಸೋಮವಾರ(ಜ.8) ಬೆಳಗ್ಗೆ 5.30ರ ಅವಧಿಯಲ್ಲಿ ನಾಗಪಟ್ಟಣಂ ಜಿಲ್ಲೆಯಲ್ಲಿ ಗರಿಷ್ಠ 167 ಮಿ.ಮೀ ಮಳೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಕಾರೈಕ್ಕಲ್ (ಪುದುಚೇರಿ ಕೇಂದ್ರಾಡಳಿತ ಪ್ರದೇಶ) 122 ಮಿ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT