ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಂಸದ ರಾಜ್ ಬಬ್ಬರ್‌ಗೆ 2 ವರ್ಷ ಜೈಲು ಶಿಕ್ಷೆ

Last Updated 7 ಜುಲೈ 2022, 14:15 IST
ಅಕ್ಷರ ಗಾತ್ರ

ಲಖನೌ: 1996ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ರಾಜ್ ಬಬ್ಬರ್ ಅವರಿಗೆ ಇಲ್ಲಿನ ಶಾಸಕ/ಸಂಸದರ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು.

ನಟ, ರಾಜಕಾರಣಿ ರಾಜ್ ಬಬ್ಬರ್ ಅವರಿಗೆ ಕೋರ್ಟ್ ₹ 8,500 ದಂಡವನ್ನೂ ವಿಧಿಸಿದೆ. ಶಿಕ್ಷೆ ಪ್ರಕಟವಾದ ಸಂದರ್ಭ ಮಾಜಿ ಸಂಸದರು ನ್ಯಾಯಾಲಯದಲ್ಲಿ ಹಾಜರಿದ್ದರು.

1996ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳ ಜೊತೆ ಕೆಟ್ಟದಾಗಿ ನಡೆದುಕೊಂಡ ಆರೋಪದಡಿ ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ.

ಅಂದು ಸಮಾಜವಾದಿ ಪಕ್ಷದಲ್ಲಿದ್ದ ರಾಜ್ ಬಬ್ಬರ್ ಅವರು, ಲಖನೌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

1996 ರ ಮೇ 2 ರಂದು ಘಟನೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT