ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ 27ನೇ ಪ್ರಕರಣ

Published 28 ಸೆಪ್ಟೆಂಬರ್ 2023, 9:19 IST
Last Updated 28 ಸೆಪ್ಟೆಂಬರ್ 2023, 9:19 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಕೋಟಾದಲ್ಲಿ ಗುರುವಾರ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷದಲ್ಲಿ ಇದು 27ನೇ ಪ್ರಕರಣವಾಗಿದೆ.  

ಮೃತ ವಿದ್ಯಾರ್ಥಿಯನ್ನು ಮೊಹಮ್ಮದ್ ತನ್ವೀರ್ (20) ಎಂದು ಗುರುತಿಸಲಾಗಿದೆ. ತನ್ವೀರ್ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ವೀರ್ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನವರಾಗಿದ್ದು, ಇಲ್ಲಿನ ಕೋಚಿಂಗ್‌ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ತಂದೆಯೊಂದಿಗೆ ತನ್ವೀರ್‌ ವಾಸಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ವೀರ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದನೋ ಇಲ್ಲವೋ ಎಂಬುದು ಕೂಡ ಖಚಿತವಾಗಿಲ್ಲ. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT